ಕನ್ನಡಿಗರು ಶಾಂತಿಪ್ರಿಯರು ಹಾಗಂತ ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಠಾಕ್ರೆಗೆ ಸಿದ್ದು ಟಕ್ಕರ್

'ಕನ್ನಡಿಗರು ಶಾಂತಿ ಪ್ರಿಯರು. ಅದೇ ನಮ್ಮ ದೌರ್ಬಲ್ಯ ಎಂದು ತಿಳಿಯಬೇಡಿ. ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ. ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ರಾಜಕಾರಣವೂ  ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧಟತನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

First Published Jan 18, 2021, 12:50 PM IST | Last Updated Jan 18, 2021, 1:06 PM IST

ಬೆಂಗಳೂರು (ಜ. 18): ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಗಡಿಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧರಿರುವುದಾಗಿ ಮಹಾ ಸಿಎಂ ಉದ್ಧವ್ ಠಾಕ್ರೆ ಹೇಳಿರುವುದು ವಿವಾದದ ಕಿಡಿ ಹೊತ್ತಿಸಿದೆ. 

'ಕನ್ನಡಿಗರು ಶಾಂತಿ ಪ್ರಿಯರು. ಅದೇ ನಮ್ಮ ದೌರ್ಬಲ್ಯ ಎಂದು ತಿಳಿಯಬೇಡಿ. ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ. ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ರಾಜಕಾರಣವೂ  ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧಟತನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಉದ್ಧವ್ ಠಾಕ್ರೆ ಹೇಳಿಕೆಗೆ ಬಿಎಸ್‌ವೈ ತಕ್ಕ ಉತ್ತರ ಕೊಡಬೇಕು' ಎಂದು ಒತ್ತಾಯಿಸಿದ್ದಾರೆ. 

ಕರ್ನಾಟಕದ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ, ಉದ್ಧವ್ ಠಾಕ್ರೆಗ ಡಿಕೆಶಿ ತಿರುಗೇಟು