MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು! ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ.

Govindaraj S  | Published: Feb 3, 2025, 6:06 PM IST

ಮೈಸೂರು (ಫೆ.03): ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು! ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಬೇನಾಮಿ ಆಸ್ತಿ ಹೊಂದಿದ ಆರೋಪದಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೇನಾಮಿ ಆಸ್ತಿ ಸಂಬಂಧ ಸ್ನೇಹಯಿ ಕೃಷ್ಣ ಅವರು ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.