ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಬೀದರ್‌ನಲ್ಲಿ ಬೀರದೇವ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Share this Video
  • FB
  • Linkdin
  • Whatsapp

ಬೀದರ್: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.1,100 ತೆಂಗಿನ ಕಾಯಿ ಒಡೆದು ಬೀರದೇವರಲ್ಲಿ ಪಾರ್ಥನೆ ಸಲ್ಲಿಸಿದರು. ಬೀದರ್ ನಗರದ ಬೀರದೇವರ ಮಂದಿರದಲ್ಲಿ ವಿಶೇಷ ಪೂಜೆ, ಅಭಿಷೇಕ ಮಾಡಿಸಲಾಯಿತು. ಗೊಂಡ ಸಮಾಜದಿಂದ ವಿಶೇಷ ಪೂಜೆ ಸಲ್ಲಿಸಿ ತೆಂಗಿನ ಕಾಯಿ ಒಡೆದು ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಗೊಂಡ ಸಮಾದ ಅಧ್ಯಕ್ಷ ಮಾಳಪ್ಪ ಅಡಸಾರೆ ಸೇರಿದಂತೆ ಹಲವರಿಂದ ವಿಶೇಷ ಪೂಜೆ ಮಾಡಿಸಲಾಯಿತು. ಇದೆ ವೇಳೆ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ತೆಂಗಿನ ಕಾಯಿ ಒಡೆಯಲಾಯಿತು.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ: ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

Related Video