ಆತ್ಮಾಹುತಿ ದಳದಂತೆ ತ್ಯಾಗಕ್ಕೆ ಬಂದಿದ್ದೇವೆ: ಸುಧಾಕರ್!

ಸಮ್ಮಿಶ್ರ ಸರ್ಕಾರವನ್ನು ರಾಜ್ಯದ ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಇದರ ಅರಿವಾಗಿಯೇ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜು.10): ಸಮ್ಮಿಶ್ರ ಸರ್ಕಾರವನ್ನು ರಾಜ್ಯದ ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಇದರ ಅರಿವಾಗಿಯೇ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ಹೇಳಿದ್ದಾರೆ. ರಾಜಭವನದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ತಮ್ಮ ಮೇಲೆ ಹಲ್ಲೆಯಾಗಬಹುದು ಎಂದು ಅರಿವಿದ್ದರೂ ತಾವೂ ಆತ್ಮಾಹುತಿ ದಳದಂತೆ ತ್ಯಾಗಕ್ಕೆ ಸಿದ್ಧರಾಗಿ ಬಂದಿದ್ದೇವೆ ಎಂದು ಮಾರ್ಮಿಕವಾಗಿ ನುಡಿದರು. ಇದೇ ವೇಳೆ ಮಾತನಾಡಿದ ಹೊಸಕೋಟೆ ಕಾಂಗ್ರೆಸ್ ಶಾಸಕ ಹಾಗೂ ವಸತಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಮೈತ್ರಿ ಸರ್ಕಾರದಲ್ಲಿ ಬಹಳಷ್ಟು ಉಸಿರುಗಟ್ಟಿದ ವಾತಾವರಣ ಇರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ... 

Related Video