ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು ?

ಅಂತೆಕಂತೆ, ಊಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ. ಸಮಯ ಬಂದಾಗ ಮಾತನಾಡುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್(JDS) ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ ಅಂಬರೀಶ್‌(Sumalatha Ambareesh) ಅಂತೆಕಂತೆ, ಊಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದಿದ್ದಾರೆ. ಅಂತಹ ಸಂದರ್ಭಗಳು ಬಂದಾಗ ನಾನು ಮಾತನಾಡುತ್ತೇನೆ. ಈಗಲೇ ಚುನಾವಣೆ(Election) ಬಗ್ಗೆ ಏನೋ ನಿರ್ಧಾರ ಮಾಡಿಲ್ಲ ಎಂದು ಸುಮಲತಾ ಹೇಳಿದ್ದಾರೆ. ಇನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಒಂದು ವರ್ಗದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆಗಬೇಕು ಅನ್ನೋ ಭಾವನೆ ಇದೆ. ಆದರೆ ಅದು ಇನ್ನೂ ಭಾವನೆ ಹಂತದಲ್ಲಿ ಇದೆ.  ಯಾವುದೇ ರೀತಿಯ ಚಾಲನೆ ಇನ್ನೂ ಸಿಕ್ಕಿಲ್ಲ ಜನಗಳ ಭಾವನೆ ಬಗ್ಗೆ ನಾವು ಯಾವ ರೀತಿ ಸ್ಪಂದಿಸಬೇಕು ಅಂತ ಪಕ್ಷದಲ್ಲಿ ಕುಳಿತು ತೀರ್ಮಾನ ಮಾಡ್ತೀವಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

Related Video