Party Rounds: ರಾಹುಲ್‌ ಗಾಂಧಿ ಸಂಸದ ಸ್ಥಾನ ಮತ್ತೆ ಸಿಗುತ್ತಾ? ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಚಾಟಿ!

'ಮೋದಿ ಸರ್‌ನೇಮ್' ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಮತ್ತು ಕೆಲವು ದಿನಗಳಿಂದ ಯುರೋಪ್ ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದಾರೆ. 

First Published Aug 4, 2023, 8:18 PM IST | Last Updated Aug 4, 2023, 8:18 PM IST

ಬೆಂಗಳೂರು (ಆ.04): 'ಮೋದಿ ಸರ್‌ನೇಮ್' ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ರಾಹುಲ್ ಗಾಂಧಿ ಅವರು ಸಂಸದ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ. ಮೋದಿ ಸರ್‌ನೇಮ್‌ನವರೆಲ್ಲ ಕಳ್ಳರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ಆ ಶಿಕ್ಷೆಗೆ ತಡೆ ಬಂದಿರುವುದರಿಂದ ರಾಹುಲ್ ಗಾಂಧಿ ಅವರು ಕಳೆದುಕೊಂಡಿದ್ದ ಸಂಸತ್ ಸದಸ್ಯತ್ವ ವಾಪಸ್ ಸಿಕ್ಕಂತಾಗಿದೆ. ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ದೊರಕಿದೆ. 

ಅಲ್ಲದೆ, ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ಆಡ್ಡಿ ಕೂಡ ನಿವಾರಣೆಯಾಗಿದೆ. ಅರ್ಜಿದಾರರು (ರಾಹುಲ್ ಗಾಂಧಿ) ನೀಡಿರುವ ಹೇಳಿಕೆ ಉತ್ತಮ ಅಭಿರುಚಿಯಿಂದ ಕೂಡಿಲ್ಲ ಎಂಬುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್, ಮುಂದೆ ಭಾಷಣಗಳನ್ನು ಮಾಡುವಾಗ ಅರ್ಜಿದಾರರು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಸೂಚನೆ ನೀಡಿದೆ. ಇನ್ನು ಕೆಲವು ದಿನಗಳಿಂದ ಯುರೋಪ್ ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದಾರೆ. ಇವರು ಪ್ರವಾಸದಿಂದ ಹಿಂದಿರುಗಿದ ಕ್ಷಣದಿಂದ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮಿಷನ್‌ ಸಂಗ್ರಹ ಮುಂತಾಗಿ ಆರೋಪಗಳನ್ನು ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Video Top Stories