ರಾಜಕಾರಣಕ್ಕೆ ಗೌಡರ ಕುಟುಂಬದ ಮತ್ತೊಂದು ಕುಡಿ : ಕುತೂಹಲದ ಬೆಳವಣಿಗೆ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೀಗ ಗೌಡರ ಕುಟುಂಬದ ಮತ್ತೊಂದಯ ಕುಡಿ ರಾಜಕಾರಣಕ್ಕೆ ಕಾಲಿಡಲು ಸಜ್ಜಾಗಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.
ಬೆಂಗಳೂರು (ನ.11): ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೀಗ ಗೌಡರ ಕುಟುಂಬದ ಮತ್ತೊಂದಯ ಕುಡಿ ರಾಜಕಾರಣಕ್ಕೆ ಕಾಲಿಡಲು ಸಜ್ಜಾಗಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.
ರೇವಣ್ಣ ಮತ್ತೊಬ್ಬ ಪುತ್ರ ಸೂರಜ್ ರಾಜಕೀಯಕ್ಕೆ : ಚುನಾವಣೆಗೆ ಟಿಕೆಟ್?
ಇತ್ತೀಚೆಗೆ ಪಕ್ಷದ ಸಭೆಗಳು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೂರಜ್ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದರು. ಈಗಾಗಲೇ ರೇವಣ್ಣ ಅವರ ಹಿರಿಯ ಪುತ್ರ ಪ್ರಜ್ವಲ್ ರೇವಣ್ಣ ಹಾಸನ ಸಂಸದರಾಗಿದ್ದಾರೆ. ಇದೀಗ ಸೂರಜ್ ಅವರನ್ನು ಮೇಲ್ಮನೆಗೆ ಕಳುಹಿಸಲು ಭಾರೀ ಕಸರತ್ತು ನಡೆದಿದೆ ಎನ್ನಲಾಗಿದೆ. ಇನ್ನು ಸೂರಜ್‌ಗೆ ಜತೆಗೆ ಜಿಲ್ಲಾ ಪಂಚಾಯ್ತಿ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹೆಸರು ಚಾಲ್ತಿಯಲ್ಲಿದೆ. ಆದರೆ, ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರು ಯಾರಿಗೆ ಟಿಕೆಟ್ ನೀಡುತ್ತಾರೆ ಎಂಬ ಕುತೂಹಲ ಮೂಡಿಸಿದೆ.