MLC Poll: ದೇವೇಗೌಡ್ರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್
ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದೆ. ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಹಾಸನ, (ನ.18): ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದೆ. ಹಾಸನ (Hassan)ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ (MLC Election) ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
'ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ದೇವೇಗೌಡ್ರು ಸಿದ್ಧ'
ಹಾಸನ ಕ್ಷೇತ್ರದಿಂದ ಜೆಡಿಎಸ್(JDS) ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ (Suraj Revanna) ಅಥವ ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡರು ಅಭ್ಯರ್ಥಿ ಆಯ್ಕೆ ಬಗ್ಗೆ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಸಿದ್ದರು. ಕೆಲವು ಶಾಸಕರು ಸಹ ಡಾ. ಸೂರಜ್ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದ್ದರು. ಅಂತಿಮವಾಗಿ ಪಕ್ಷ ಸೂರಜ್ ರೇವಣ್ಣ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಅಲ್ಲದೇ ನಾಮಪತ್ರ ಸಲ್ಲಿಸಲು ಮುಹೂರ್ತವನ್ನು ಸಹ ಫಿಕ್ಸ್ ಮಾಡಲಾಗಿದೆ.