ಯೋಗೇಶ್ವರ್ ಮಾತು ಭೂತದ ಬಾಯಲ್ಲಿ ಭಗವದ್ಗೀತೆಯಂತೆ: ಶರವಣ

ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಸಿ.ಪಿ. ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಬಾಂಬ್ ಹಾಕಿದ್ದರು, ಈ ಕುರಿತಂತೆ ಶರವಣ ಸುವರ್ಣ ನ್ಯೂಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜು.30): ನಮ್ಮ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿ.ಪಿ. ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಧಾನಪರಿಷತ್ ಸ್ಥಾನ ನೀಡಲಾಗಿದೆ. ನಮ್ಮ ಪಕ್ಷ ಬಿಜೆಪಿ ಜತೆಗೆ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಜೆಡಿಎಸ್ ವಕ್ತಾರ ಟಿ.ಎ. ಶರವಣ ಹೇಳಿದ್ದಾರೆ.

ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಸಿ.ಪಿ. ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಬಾಂಬ್ ಹಾಕಿದ್ದರು, ಈ ಕುರಿತಂತೆ ಶರವಣ ಸುವರ್ಣ ನ್ಯೂಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಬಿಜೆಪಿ ವಾಮ ಮಾರ್ಗದಲ್ಲಿ ಸರ್ಕಾರವನ್ನು ರಚಿಸಿದೆ. ನಾವು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸಮಾನ ಅಂತರವನ್ನು ಕಾಯ್ದುಕೊಂಡಿದ್ದೇವೆ. ಯೋಗೇಶ್ವರ್ ಬಾಯಿಂದ ಈ ಮಾತುಗಳನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video