ಪಕ್ಷ ಪೂಜೆ ಜತೆ ವ್ಯಕ್ತಿ ಪೂಜೆಯನ್ನೂ ಮಾಡ್ತೇನೆ, ತಪ್ಪೇನು? ಡಿಕೆಶಿಗೆ ಜಮೀರ್ ಟಾಂಗ್

ಮುಂದಿನ ಮುಖ್ಯಮಂತ್ರಿ ಯಾರು..? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಶಾಸಕ ಜಮೀರ್‌ ಅಹಮದ್‌ ನಡುವಿನ ತಿಕ್ಕಾಟ ಮುಂದುವರಿದಿದೆ. 

Share this Video
  • FB
  • Linkdin
  • Whatsapp

ಮುಂದಿನ ಮುಖ್ಯಮಂತ್ರಿ ಯಾರು..? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಶಾಸಕ ಜಮೀರ್‌ ಅಹಮದ್‌ ನಡುವಿನ ತಿಕ್ಕಾಟ ಮುಂದುವರಿದಿದೆ. ಎಲ್ಲರೂ ಬಾಯ್ಮುಚ್ಚಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಎಚ್ಚರಿಕೆ ನೀಡಿರುವ ಡಿಕೆಶಿಗೆ, ಜಮೀರ್ ಟಾಂಗ್ ನೀಡಿದ್ದಾರೆ. 

Add Asianetnews Kannada as a Preferred SourcegooglePreferred

‘ನನ್ನ ಬಾಯ್ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ಸತ್ತಾಗಷ್ಟೇ ನನ್ನ ಬಾಯಿ ಮುಚ್ಚೋದು. ಅಲ್ಲಿವರೆಗೆ ನಾನು ಮಾತನಾಡುತ್ತಲೇ ಇರುತ್ತೇನೆ’ ಎಂದು ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮಿರ್‌ ಅಹಮದ್‌ ಹೇಳಿದ್ದಾರೆ. 

ಕಾಂಗ್ರೆಸ್‌ ಕಟ್ಟಿಬೆಳೆಸಬೇಕಿದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕೆಂದು ಹೇಳಿಕೆ ನೀಡಿದ್ದಾರೆ. ಆದರೆ ವೈಯಕ್ತಿಕವಾಗಿ ನನ್ನ ಹೆಸರನ್ನು ಡಿ.ಕೆ.ಶಿವಕುಮಾರ್‌ ಹೇಳಿಲ್ಲ. ಎಲ್ಲರೂ ಸೇರಿ ಪಕ್ಷ ಕಟ್ಟೋಣ ಎಂದಿದ್ದಾರೆ. ಮುಖ್ಯಮಂತ್ರಿ ಯಾರು ಆಗಬೇಕೆಂದು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ನನ್ನ ವೈಯಕ್ತಿಕ ಅಭಿಪ್ರಾಯ ನಾನು ಸಿದ್ದರಾಮಯ್ಯ ಆಗಬೇಕು ಎಂದು ಹೇಳಿದ್ದೇನೆ. ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ ಎಂದರು.

Related Video