National Flag Row: ಸಚಿವ ಈಶ್ವರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ
ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಚಿವ ಈಶ್ವರಪ್ಪ ಬೆನ್ನಿಗೆ ರೇಣುಕಾಚಾರ್ಯ ನಿಂತಿದ್ದಾರೆ.
ದಾವಣಗೆರೆ, (ಫೆ.20) ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ (Kesari Flag) ಹಾರಿಸುವ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.
ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ
ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ವಿಧಾನಸೌಧ ಹಾಗೂ ವಿಧಾನ ಪರಿಷತ್ನಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ, ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆಬ್ರವರಿ 21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ.
ಇನ್ನು ಈ ಬಗ್ಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕ್ಷಮೆನೂ ಕೇಳಲ್ಲ. ಯಾಕೆ ಕ್ಷಮೆ ಕೇಳಬೇಕೆಂದು ಈಶ್ಚರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.