ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ಬಳಿಕವೂ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ತಿರುಗೇಟು ನೀಡಿದ್ದಾರೆ. ಸಿಎಂ ರೇಸ್ ಚಾಲನೆ ಕೊಟ್ಟಿದ್ದು ಡಿಕೆ ಶಿವಕುಮಾರ್. ನನಗೂ ಸಿಎಂ ಆಗುವ ಆಸೆ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮತ್ತೆ ಜಮೀರ್ ಹೇಳಿದ್ದಾರೆ. ಕಾಂಗ್ರೆಸ್ ಬಣರಾಜಕೀಯ, ಬಿಎಸ್‌ವೈ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಸಿದ್ದರಾಮಯ್ಯ, ರಾಮಲಿಂಗರೆಡ್ಡಿ, ಎಂಬಿ ಪಾಟೀಲ್, ಜಮೀರ್ ಅಹಮ್ಮದ್ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡೆಕಿ ಶಿವಕುಮಾರ್ ಕೆರಳಿಸಿದೆ. ಜಮೀರ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಕಾಣಿಸಿಕೊಂಡಿದ್ದಾರೆ. ಪರೋಕ್ಷವಾಗಿ ಸಿಎಂ ಆಸೆಯನ್ನು ಖರ್ಗೆ ಬಿಚ್ಚಿಟ್ಟಿದ್ದಾರೆ. ಖರ್ಗೆ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ನಿವೃತ್ತಿ, ಸಿದ್ದರಾಮೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video