ಬಂಡೆ ನಂಬಿದ್ರೆ ಸಿದ್ದರಾಮಯ್ಯ ಕಥೆ ಮುಗೀತು! ಡಿಕೆಶಿ ಕುರಿತು ಸಿದ್ದುಗೆ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯಲು ಬಂಡೆ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಕಥೆ ಮುಗೀತು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ಮಾಡಿದರು. 

First Published Aug 11, 2024, 1:57 PM IST | Last Updated Aug 11, 2024, 1:57 PM IST

ಮೈಸೂರಿನಲ್ಲಿ ಜನಾಂದೋಲನ ಮೂಲಕ ಕಾಂಗ್ರೆಸ್ ಪಕ್ಷ ಬಿಜೆಪಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಇಂದು ಅದೇ ಮೈಸೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪಾದಯಾತ್ರೆ ಅಂತ್ಯಗೊಳಿಸಿ ಕಾಂಗ್ರೆಸ್ ವಿರುದ್ಧ ಅಬ್ಬರಿಸಿವೆ. ಕೆಲ ಪ್ರಮುಖ ನಾಯಕರುಗಳು ಕಾಂಗ್ರೆಸ್ ಸರ್ಕಾರದ ಮೇಲೆ ಆಕ್ರೋಶವನ್ನು ಹೊರ ಹಾಕಿದ್ದಾರೆ. ಕಾಂಗ್ರೆಸ್ ಮೇಲೆ ಕೇಳಿ ಬಂದಿರುವ ಹಗರಣಗಳ ಆರೋಪ ಕುರಿತು ಬಿಜೆಪಿ ಮತ್ತು ಜೆಡಿಎಸ್‌ನ ಇನ್ನೂ ಕೆಲ ನಾಯಕರು ಮಾತ್ನಾಡಿದ್ದಾರೆ. ಪ್ರಹ್ಲಾದ್ ಜೋಶಿ ಮತ್ತು ವಿಜಯೇಂದ್ರ ಅವರ ಮಾತುಗಳು. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ನಾಯಕರು ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ದೊಡ್ಡ ಮಟ್ಟದಲ್ಲಿ ಅಬ್ಬರಿಸಿದ್ದಾರೆ. ಹಾಗೆನೇ ಈ ಅಬ್ಬರ ಇಲ್ಲಿಗೆ ನಿಲ್ಲೋದಿಲ್ಲವೆಂದು ಕಾಂಗ್ರೆಸ್‌ಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. 

Video Top Stories