
ಪ್ರಮಾಣವಚನ ಮುಗಿದ 24 ಗಂಟೆಯೊಳಗೆ ಅಧಿಕಾರ ಸ್ವೀಕರಿಸಿದ ಸಚಿವ ರಾಜೀವ್ ಚಂದ್ರಶೇಖರ್
ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಯೊಳಗೆ ನೂತನ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದರು.
ನವದೆಹಲಿ, (ಜುಲೈ.08): ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಯೊಳಗೆ ನೂತನ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕದಿಂದ ಮೊದಲನೆಯವರಾಗಿ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ!
ಕೌಶಲ್ಯಾಭಿವೃದ್ಧಿ , ಉದ್ಯಮ ಮತ್ತು ಎಲೆಕ್ಟ್ರಾನಿಕ್ಸ್, ಮಾಹಿತಿ ರಾಜ್ಯ ಖಾತೆ ಸಚಿವರಾಗಿ ರಾಜೀವ್ ಚಂದ್ರಶೇಖ ಇಂದು (ಗುರುವಾರ) ದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೌಶಲ್ಯ ಅಭಿವೃದ್ಧಿ ಸಚಿವಾಲಯಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲೇ ಬಂದು ಅಧಿಕಾರ ಸ್ವೀಕಾರ ಮಾಡಿದರು.