
ಕಾಂಗ್ರೆಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ: ರಾಜೀವ್ ಚಂದ್ರಶೇಖರ್ ಟ್ವೀಟ್
ಕಾಂಗ್ರೆಸ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುತ್ತೇವೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸದ ಕಾಂಗ್ರೆಸ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗುವುದು ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ. ಮೇ. 7 ರಂದು ಸಂಜೆ 7 ಗಂಟೆಯೊಳಗೆ ಪುರಾವೆಗಳನ್ನು ಒದಗಿಸಬೇಕು ಎಂದು ಚುನಾವಣಾ ಆಯೋಗ ಸೂಚಿಸಿತ್ತು. ಇಲ್ಲವೇ ಹೇಳಿದ ಸುಳ್ಳುಗಳಿಗೆ ಕ್ಷಮೆಯಾಚಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಕಳುಹಿಸಿದೆ. ಬಿಜೆಪಿ ಭ್ರಷ್ಟಚಾರ ಎಂದು ಕಾಂಗ್ರೆಸ್ ಜಾಹೀರಾತು ನೀಡಿತ್ತು. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿತ್ತು. ಆದ್ರೆ ಇಲ್ಲಿಯವರೆಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಯಾವುದೇ ಸಾಕ್ಷ್ಯಒದಗಿಸಿಲ್ಲ. ಹಾಗಾಗಿ ಕಾಂಗ್ರೆಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: 224 ರಣಕ್ಷೇತ್ರಗಳಲ್ಲಿ 11 ಸೆಂಟರ್ ಆಫ್ ಅಟ್ರಾಕ್ಷನ್..11ರ ರಹಸ್ಯದಲ್ಲಿ ಅಡಗಿರೋ ಗುಟ್ಟೇನು ಗೊತ್ತಾ..?