Asianet Suvarna News Asianet Suvarna News

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ? ಶುರುವಾಯ್ತು ಟಿಕೆಟ್‌ ರೇಸ್!

ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಗೆ ತೆರೆಮರೆಯಲ್ಲಿ  ಬಿಜೆಪಿ ಸಿದ್ಧತೆ ಆರಂಭಿಸಿದೆ.2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಒಂದು ಆಡಿಯೋ ಸಹ ವೈರಲ್ ಆಗಿದೆ. 

ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಗೆ ತೆರೆಮರೆಯಲ್ಲಿ  ಬಿಜೆಪಿ ಸಿದ್ಧತೆ ಆರಂಭಿಸಿದೆ. ಹೀಗಾಗಿ  ಬಿಜೆಪಿಚನಾವಣೆಗೆ ಭರ್ಜರಿ ತಯಾರಿ ಆರಂಭಿಸಿದ್ದು,  ಈ ಬಾರಿ ಅಭ್ಯರ್ಥಿಗಳಲ್ಲಿ ದಲಾವಣೆಗಳಾಗುವ ಮಾತುಗಳು ಕೇಳಿಬರುತ್ತಿವೆ. 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಒಂದು ಆಡಿಯೋ ಸಹ ವೈರಲ್ ಆಗಿದೆ. ಖುದ್ದು ಹಾಲಿ ಸಂಸದ ಜಿಎಸ್ ಬಸವರಾಜು ಅವರು ಮಾತನಾಡಿರುವ ಎನ್ನಲಾದ ಆಡಿಯೋ  ವೈರಲ್‌ ಆಗಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ನನ್ನ ಸೀಟ್​ ಅನ್ನು ಮಾಜಿ ಸಚಿವ ವಿ.ಸೋಮಣ್ಣಗೆ ಕೊಡುತ್ತಾರೆ. ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಈಗಾಗಲೇ ನಾನು ದೆಹಲಿಗೆ ಹೋಗಿದ್ದಾಗ ಹೇಳಿದ್ದೇನೆ ಎಂದು ಸಂಸದ G.S.ಬಸವರಾಜು ಅವರದ್ದು ಎನ್ನಲಾದ ಆಡಿಯೋ  ಲೀಕ್ ಆಗಿದೆ. 
 

Video Top Stories