ಉರಿಗೌಡ, ನಂಜೇಗೌಡ ಕಾಲ್ಪನಿಕ ಸೃಷ್ಟಿ : ಬಿಜೆಪಿಯಿಂದ ಒಕ್ಕಲಿಗರಿಗೆ ಅವಮಾನ
ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿದ್ದಾರೆ.
ಮಂಡ್ಯ (ಮಾ.13): ಇತಿಹಾಸದಲ್ಲಿ ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಕುತಂತ್ರದಿಂದ ಕೊಂದಿದ್ದಾರೆ ಎಂದು ಬಿಜೆಪಿ ಸುಳ್ಳು ವ್ಯಕ್ತಿಗಳನ್ನು ಸೃಷ್ಟಿಸಿ ನಮ್ಮ ಸಮುದಾಯದ ಇಬ್ಬರು ವ್ಯಕ್ತಿಗಳನ್ನು ಹೆಸರನ್ನು ಹೇಳಿಕೊಂಡು ಗೌರವ ಹಾಳುಮಾಡಲಾಗುತ್ತಿದೆ. ಇದನ್ನು ಹೀಗೆಯೇ ಮುಂದುವರೆಸಿದರೆ ಅವರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ. ಈ ಬಗ್ಗೆ ಸ್ವತಃ ಎಚ್ಚೆತ್ತುಕೊಮಡು ಬಿಜೆಪಿಯವರು ನಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಫ್ಯಾಕ್ಟರಿ ಸರ್ಕಲ್‌ನಲ್ಲಿ ಉಡಿಗೌಡ, ನಂಜೇಗೌಡ ಎಂಬ ದ್ವಾರವನ್ನು ನಿರ್ಮಿಸಲಾಗಿತ್ತು. ಇದಕ್ಕೆ ಭಾರಿ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ವಿವಾದಿತ ದ್ವಾರವನ್ನು ತೆರವುಗೊಳಿಸಲಾಗಿತ್ತು.