ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ..? ಸರ್ವೆ ಲೆಕ್ಕಾಚಾರ ಹೀಗಿದೆ

2022 ರ ಆರಂಭದಲ್ಲಿ ನಡೆಯಲಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ಬಿಜೆಪಿ ಉತ್ತರಪ್ರದೇಶ ಸೇರಿ ನಾಲ್ಕು ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ ಎಂದು ಎಂದು ಎಬಿಪಿ ನ್ಯೂಸ್‌ ಹಾಗೂ ಸಿ-ವೋಟರ್‌ ನಡೆಸಿರುವ ಸಮೀಕ್ಷೆ ತಿಳಿಸಿದೆ.

First Published Nov 15, 2021, 2:50 PM IST | Last Updated Nov 15, 2021, 2:50 PM IST

ನವದೆಹಲಿ(ನ. 15): 2022 ರ ಆರಂಭದಲ್ಲಿ ನಡೆಯಲಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ಬಿಜೆಪಿ ಉತ್ತರಪ್ರದೇಶ ಸೇರಿ ನಾಲ್ಕು ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ ಎಂದು ಎಂದು ಎಬಿಪಿ ನ್ಯೂಸ್‌ ಹಾಗೂ ಸಿ-ವೋಟರ್‌ ನಡೆಸಿರುವ ಸಮೀಕ್ಷೆ ತಿಳಿಸಿದೆ. ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರ ಹಾಗೂ ಗೋವಾದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಂಭವವಿದೆ. ಆದರೆ ಪಂಜಾಬ್‌ನಲ್ಲಿ ಶೂನ್ಯ ಸಂಪಾದನೆ ಮಾಡುವ ನಿರೀಕ್ಷೆ ಇದೆ 

403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 202 ಸ್ಥಾನಗಳು ಬೇಕು. 2017ರಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಭರ್ಜರಿ ಬಹುಮತ ಗಳಿಸಿತ್ತು. ಆದರೆ ಈ ಬಾರಿ ಬಿಜೆಪಿ 108 ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆ ಇದೆ. ಆದರೂ ಬಿಜೆಪಿ ಹಾಗೂ ಮಿತ್ರ ಪಕ್ಷಗಳು 217 ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ. ಸಮಾಜವಾದಿ ಪಕ್ಷ ಪುಟಿದೆದ್ದಿದ್ದು 156 ಸ್ಥಾನ ಗಳಿಸುವ ಸಾಧ್ಯತೆ ಇದ್ದರೆ, ಬಿಎಸ್ಪಿ 18 ಹಾಗೂ ಕಾಂಗ್ರೆಸ್‌ ಕೇವಲ 8 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಬಹುದು.