Asianet Suvarna News Asianet Suvarna News

ವೋಟರ್ ಐಡಿ ಹಗರಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ವೋಟರ್ ಐಡಿ ಹಗರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ರಾಜ್ಯಕ್ಕೆ ಕೇಂದ್ರತಂಡ ಆಗಮಿಸಿ ಮಹತ್ವದ ಮಾಹಿತಿ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹ ಹೆಚ್ಚಾಗಿದೆ.

ಮತದಾರರ ಪಟ್ಟಿಯಲ್ಲಿ ಚಿಲುಮೆ ಸಂಸ್ಥೆ ಮಾಡಿರುವ ಅಕ್ರಮಗಳ ತನಿಖೆ ಚುರುಕಾಗಿದೆ. ಹೈಕೋರ್ಟ್ ಮುಖ್ಯ ನ್ಯಾಮೂರ್ತಿ ನೇತೃತ್ವದಲ್ಲಿ ತನಿಖೆ ಮಾಡಬೇಕು ಅನ್ನೋ ಆಗ್ರಹ ಕೇಳಿ ಬಂದ ಬೆನ್ನಲ್ಲೇ ರಾಜ್ಯಕ್ಕೆ ಚುನಾವಣಾ ಆಯೋಗದ ತಂಡ ಆಗಮಿಸಿದೆ. ಚುನಾವಣಾಧಿಕಾರಿಗಳ ಜೊತೆ ಕೇಂದ್ರದ ತಂಡ ಚರ್ಚೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ ವ್ಯಾಪ್ತಿಯ ಮತ ಕ್ಷೇತ್ರಗಳು ಮಾತ್ರವಲ್ಲದೆ, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಮಾಹಿತಿ ಸಂಗ್ರಹಿಸಿ ಇರಿಸಿದ್ದ. ಕ್ಷೇತ್ರದ ಒಟ್ಟು ಜನಸಂಖ್ಯೆ, ಮಹಿಳೆಯರ ಸಂಖ್ಯೆ, ಪುರುಷರ ಸಂಖ್ಯೆ, ಜಾತಿವಾರು ಮತದಾರರ ಸಂಖ್ಯೆ, ಯುವ ಮತದಾರರ ಸಂಖ್ಯೆ, ಮತದಾನದ ಗುರುತಿನ ಚೀಟಿ ಇಲ್ಲದವರ ಮಾಹಿತಿ, ಗುರುತಿನ ಚೀಟಿ ಇದ್ದು ಕ್ಷೇತ್ರದಿಂದ ಹೊರಗಿರುವ ಮತದಾರರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಈ ಮತದಾರರ ಮಾಹಿತಿಯನ್ನು ಚುನಾವಣಾ ಅಭ್ಯರ್ಥಿಗಳಿಗೆ ಗೌಪ್ಯವಾಗಿ ನೀಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.