ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಮತದಾನ: ಸೀರೆ ಮೂಲಕ ಮತದಾನ ಜಾಗೃತಿ ಮೂಡಿಸಿದ ಡಿಸಿ ಶಿಲ್ಪಾ ನಾಗ್‌

ಇಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಈ ನಡುವೆ ಸಿಎಂ ಸಿದ್ದರಾಯಯ್ಯ ಅವರು ತಮ್ಮ ಹುಟ್ಟೂರು ಸಿದ್ದರಾಮಯ್ಯನ ಹುಂಡಿಗೆ ತೆರಳಿ ಮತ ಚಲಾಯಿಸಿದ್ದಾರೆ. ಈ ನಡುವೆ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ನಲ್ಲಿ ಕಡಿಮೆ ಮತದಾನವಾಗಿದೆ.

Share this Video
  • FB
  • Linkdin
  • Whatsapp

ತಮ್ಮ ಹುಟ್ಟೂರು ಸಿದ್ದರಾಮಯ್ಯನ ಹುಂಡಿಗೆ ಮತ ಚಲಾಯಿಸಲು ತೆರಳಿದ ಸಿದ್ದರಾಮಯ್ಯ (CM Siddaramaiah) ಅವರಿಗೆ ಅಭಿಮಾನಿಗಳು ಹಾರ, ತುರಾಯಿ ಹಾಕಿ ಸ್ವಾಗತಿಸಿದರು. ಸಿಎಂ ವಾಹನದ ಮುಂದೆ ಜಮಾಯಿಸಿ ಜೈ ಕಾರ ಕೂಗಿದರು. ಇದಾದ ನಂತರ ಸಿಎಂ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದೇ ವೇಳೆ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ (Yaduveer Krishnadatta Chamaraja Wadiyar) ಅವರು ತಮ್ಮ ಮತ ಹಾಕಿದ್ದಾರೆ. ರಾಜ್ಯದೆಲ್ಲೆಡೆ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಮತದಾರರು ಸರತಿ ಸಾಲಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ(Lok Sabha Elections) ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ನಲ್ಲಿ ಕಡಿಮೆ ಮತದಾನವಾಗಿದೆ.

ಇದನ್ನೂ ವೀಕ್ಷಿಸಿ: 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: 247 ಅಭ್ಯರ್ಥಿಗಳು..2.88 ಕೋಟಿ ಮತದಾರರು

Related Video