ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ನಮ್ಮ ಬೆಂಬಲವಿದೆ. ಜೊತೆಗೆ ಕಾಂಗ್ರೆಸ್‌ ತನ್ನ ಎಲ್ಲಾ ಗ್ಯಾರಂಟಿಗಳನ್ನು ಕಂಡೀಷನ್‌ ಇಲ್ಲದೇ ಜಾರಿಗೆ ತರಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು: ಕಾಂಗ್ರೆಸ್‌ನವರು ಕೊಟ್ಟಿರುವ ಭರವಸೆಗಳನ್ನು ಯಾವುದೇ ಕಂಡೀಷನ್‌ ಇಲ್ಲದೇ ಜಾರಿಗೆ ತರಬೇಕು. ಜೊತೆಗೆ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡಬೇಕು. ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಬಾರದು ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಈ ಎಲ್ಲಾ ವಿಷಯಗಳನ್ನು ಇಟ್ಟುಕೊಂಡು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಒಂದು ವೇಳೆ ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ತಡ ಮಾಡಿದ್ರೆ, ರಾಜ್ಯಾದ್ಯಂತ ಹೋರಾಡುತ್ತೇವೆ ಎಂದಿದ್ದಾರೆ. ಜೊತೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವರು ಬಹಳ ಜವಬ್ದಾರಿ ಇಟ್ಟುಕೊಂಡು ಮಾತನಾಡುತ್ತಿದ್ದಾರೆ. ಅವರನ್ನು ಹೋರಾಟಕ್ಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

Related Video