ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಲಿ ಎಂಬುದು ನಮ್ಮ ಆಸೆ: ಗುಬ್ಬಿ ಶಾಸಕ ಶ್ರೀನಿವಾಸ್‌

ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ.14): ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಸಿಎಂ ರೇಸ್‌ನಲ್ಲಿ ಡಾ.ಜಿ.ಪರಮೇಶ್ವರ್‌ ಹೆಸರು ಬಂದಿದೆ. ಹೌದು! ಇದೀಗ ಪರಮೇಶ್ವರ್ ಪರ ಗುಬ್ಬಿ ಶಾಸಕ ಶ್ರೀನಿವಾಸ ಬ್ಯಾಟ್‌ ಬೀಸಿದ್ದಾರೆ. ಅವರು ಕಾಂಗ್ರೆಸ್‌ನ ಹಿರಿಯ ನಾಯಕ, ಹಾಗಾಗಿ ಅವರಿಗೆ ಸಿಎಂ ಸ್ಥಾನ ಕೊಟ್ರೆ ತುಂಬಾ ಸಂತೋಷ ಎಂದು ಶ್ರೀನಿವಾಸ್‌ ಹೇಳಿದ್ದಾರೆ. ಜೊತೆಗೆ ಎಲ್ಲ ನಿರ್ಧಾರವನ್ನು ಹೈಕಮಾಂಡ್‌ ಮಾಡುತ್ತೆ ಎಂದು ಹೇಳಿದ್ದಾರೆ. ಈ ಮೂಲಕ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನವನ್ನು ನೀಡಬೇಕೆಂದು ಗುಬ್ಬಿ ಶ್ರೀನಿವಾಸ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. 

Related Video