ಭ್ರಷ್ಟಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಬಿಜೆಪಿ ಕ್ರಮ ಏನು?
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಬಳಿಕ ಅವರ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ನಗದು ಪತ್ತೆಯಾಗಿತ್ತು.
ಬೆಂಗಳೂರು (ಮಾ.06): ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಬಳಿಕ ಅವರ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ನಗದು ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿ ಎಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಆದ್ದರಿಂದ ನಿರೀಕ್ಷಣಾ ಜಾಮೀನಿಗಾಗಿ ಶಾಸಕರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದರು. ಇದೀಗ ಭ್ರಷ್ಟಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತನ್ನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಬಿಜೆಪಿ ಏನು ಕ್ರಮ ಕೈಗೊಂಡಿದೆ ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ. ಅಲ್ಲದೇ ರಾಜ್ಯ ಬಿಜೆಪಿ ಘಟಕದಿಂದ ಮಾಡಾಳ್ ಉಚ್ಚಾಟನೆಗೆ ಶಿಫಾರಸು ಮಾಡಲಾಗಿದ್ದು, ಶಾಸಕ ಮಾಡಾಳ್ ಬಂಧನಕ್ಕೆ ಬಿ.ಎಸ್.ಯಡಿಯೂರಪ್ಪ ಆಗ್ರಹ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.