PSI Scam: ಇಷ್ಟು ದಿನಗಳಾದ್ರೂ ದಿವ್ಯಾ ಹಾಗರಗಿ ಅರೆಸ್ಟ್ ಯಾಕಿಲ್ಲ? ಶಾಸಕ ಪ್ರಶ್ನೆ
ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಇದುವರೆಗೂ ಬಂಧನವಾಗಿಲ್ಲ..ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಕಲಬುರಗಿ, .23): ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ರೀತಿಯ ಇಕ್ಕಟ್ಟಿಗೆ ಸಿಲುಕಿದೆ. ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ಬಿಜೆಪಿ ಯ ಕಲಬುರಗಿ ಜಿಲ್ಲೆಯ ನಾಯಕಿ ಹೆಸರು ತಳುಕು ಹಾಕಿಕೊಂಡಿರುವುದು ತಲೆನೋವು ಉಂಟು ಮಾಡಿದೆ.
PSI Recruitment Scam ಇದು ಲೇಡಿ ಕಿಂಗ್‌ಪಿನ್ ದಿವ್ಯಾ ಹಾಗರಗಿ ಡೀಲ್ ಮಾಡುತ್ತಿದ್ದ ಪರಿ!
ಈ ನಡುವೆ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕುಟುಂಬದ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಫೋಟೋಗಳು ಹರಿದಾಡುತ್ತಿದ್ದು ಸರ್ಕಾರಕ್ಕೂ ಇರುಸು ಮುರುಸು ತಂದೊಡ್ಡಿದೆ. ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಇದುವರೆಗೂ ಬಂಧನವಾಗಿಲ್ಲ..ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.