ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ನಡುವೆ ಹಣಾಹಣಿ!?
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸುವುದು ಪಕ್ಕಾ ಆಗಿದೆ. ಅವರ ವಿರುದ್ಧ ಬಿ ವೈ ವಿಜಯೇಂದ್ರ ಸ್ಫರ್ಧಿಸ್ತಾರಾ ಎಂಬ ಚರ್ಚೆ ಆರಂಭವಾಗಿದೆ.
ಚಿತ್ರದುರ್ಗ (ಮಾ.24): ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸುವುದು ಪಕ್ಕಾ ಆಗಿದೆ. ಚಿತ್ರದುರ್ಗದಲ್ಲಿ ಸಿದ್ಧರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ. ವರುಣಾ ಕ್ಷೇತ್ರದಲ್ಲೇ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ನಮ್ಮ ಮನೆಯಲ್ಲಿ ಹೇಳ್ತಿದ್ದಾರೆ. 25 ಕ್ಷೇತ್ರಗಳಲ್ಲಿ ನನಗೆ ಸ್ಪರ್ಧಿಸುವಂತೆ ಆಹ್ವಾನವಿದೆ ಎಂದು ಹೇಳಿದ್ದಾರೆ. ಎಲ್ಲಾ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದೇನೆಂದು ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಾರೆ.
Breaking ವರುಣಾ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ, ಎರಡು ಕಡೆ ನಿಲ್ಲುವ ಇಂಗಿತ!
ಈ ಮೂಲಕ ಹಲವು ದಿನಗಳಿಂದ ಇದ್ದ ಸಿದ್ದರಾಮಯ್ಯ ಅವರ ಕ್ಷೇತ್ರ ಹುಡುಕಾಟದ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಂತಾಗಿದೆ. ಆದರೆ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಫರ್ಧಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದು ಸಿದ್ದು ಕಣ್ಣಿಟ್ಟಿರುವ ಎರಡನೇ ಕ್ಷೇತ್ರ ಯಾವುದು ಎಂಬುದು ಈಗ ಇರುವ ಕುತೂಹಲದ ಪ್ರಶ್ನೆಯಾಗಿದೆ.