Asianet Suvarna News Asianet Suvarna News

National Flag Row ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಚಾರದ ಬಗ್ಗೆ 13 ಸಾರಿ ಹೇಳಿದ್ದೇನೆ, ಈಶ್ವರಪ್ಪ ಟಾಂಗ್

ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ಶಿವಮೊಗ್ಗ, (ಫೆ.20) ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್​ ಧರಣಿ ನಡೆಸುತ್ತಿದೆ. ವಿಧಾನಸೌಧ ಹಾಗೂ ವಿಧಾನ ಪರಿಷತ್​ನಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ, ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆಬ್ರವರಿ 21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. ನಾಳೆ ತಾಲೂಕು ಕೇಂದ್ರ, ವಿಧಾನಸಭಾ ಕ್ಷೇತ್ರದಲ್ಲಿ ಧರಣಿಗೆ ಕರೆ ನೀಡಲಾಗಿದೆ.

National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

ಇನ್ನು ಈ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಡೋಂಟ್ ಕೇರ್ ಎಂದಿದ್ದಾರೆ. ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ವಿಪಕ್ಷದವರು ಪ್ರತಿಭಟನೆ ಮಾಡುವುದು ಅವರ ಕೆಲಸ ಈ ವಿವಾದದ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ. 

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನನ್ನ ಸ್ನೇಹಿತರೇ. ಮತ್ತೆ ಹೇಳಿಕೆ ನೀಡಿ ವಿವಾದ ಬೆಳೆಸುವುದು ನನಗಿಷ್ಟವಿಲ್ಲ. ನಾನೊಂದು ಹೇಳಿಕೆ ಕೊಟ್ಟರೆ ಅವರೊಂದು ಹೇಳುತ್ತಾರೆ. ಹೀಗಾಗಿ ಈ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ. ರಾಜ್ಯದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಸದನದಲ್ಲಿ ಚರ್ಚಿಸಲು ವಿಪಕ್ಷಗಳು ಅವಕಾಶ ನೀಡಬೇಕು ಎಂದು ಕೆ.ಎಸ್.ಈಶ್ವರಪ್ಪ ಮನವಿ ಮಾಡಿದ್ದಾರೆ.

Video Top Stories