ಬಳ್ಳಾರಿ ಸಂಸದ ತುಕಾರಾಂಗೆ ಒಲಿಯುತ್ತಾ KPCC ಅಧ್ಯಕ್ಷರ ಗಾದಿ?

Isthiyakh S  | Published: Mar 31, 2025, 4:00 PM IST

​ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಕುರಿತು ಇತ್ತೀಚೆಗೆ ಚರ್ಚೆಗಳು ನಡೆಯುತ್ತಿವೆ. ಪ್ರಸ್ತುತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವರು ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಡಿ.ಕೆ. ಶಿವಕುಮಾರ್ ಅವರು, ನೂರು ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆಯ ನಂತರ ನಾನು ಮುಕ್ತನಾಗುತ್ತೇನೆ, ಆ ಬಳಿಕ ಯಾರು ಬೇಕಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಇತರ ರಾಜ್ಯಗಳಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ; ಕರ್ನಾಟಕದಲ್ಲೂ ಶೀಘ್ರದಲ್ಲೇ ಬದಲಾವಣೆ ಆಗಬಹುದು ಎಂದು ಸುಳಿವು ನೀಡಿದ್ದರು. ಆದರೆ, ಖರ್ಗೆ ಅವರು ನಂತರದಲ್ಲಿ ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ನಾನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ​ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Read More...