'ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ'
ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು (ಶನಿವಾರ) ಸಹ ಮುಂದುವರೆಸಿದ್ದಾರೆ.
ಬೆಂಗಳೂರು, (ಏ.02): ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು (ಶನಿವಾರ) ಸಹ ಮುಂದುವರೆಸಿದ್ದಾರೆ.
ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ, ಹಿಂದೂ ಸಂಘಟನೆಗಳ ವಿರುದ್ಧ ವಾಗ್ದಾಳಿ ಮುಂದುವರಿಸಿದ ಎಚ್‌ಡಿಕೆ
ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಅವರು, ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ ಎಂದು ಹೇಳಿರುವ ಅವರು, ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.