Asianet Suvarna News Asianet Suvarna News

ನೂರು ದಿನ ಪೂರೈಸಿದ 'ಗಂಧದ ಗುಡಿ': ಅಪ್ಪು ಹುಟ್ಟುಹಬ್ಬಕ್ಕೆ ರೀ ರಿಲೀಸ್?

ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರ ಕನಸಿನ ಕೂಸು 'ಗಂಧದ ಗುಡಿ' ಸಾಕ್ಷ್ಯಚಿತ್ರ ಬಿಡುಗಡೆಯಾಗಿ ನೂರು ದಿನ ಪೂರೈಸಿದೆ.
 

ಗಂಧದ ಗುಡಿ ಸಾಕ್ಷ್ಯಚಿತ್ರ ನೂರರ ಸಂಭ್ರಮದಲ್ಲಿದ್ದು, ಅಕ್ಟೋಬರ್‌ 28ರಂದು ವಿಶ್ವದಾದ್ಯಂತ ಈ ಡಾಕ್ಯುಮೆಂಟರಿ ಬಿಡುಗಡೆ ಆಗಿತ್ತು. ಈ ಸಾಕ್ಷ್ಯಚಿತ್ರಕ್ಕೆ ಅಮೋಘವರ್ಷ ನಿರ್ದೇಶನ ಮಾಡಿದ್ದು, ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ನಿರ್ಮಿಸಿದ್ದರು. ಈಗ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ನಿರ್ಮಾಪಕಿ ಅಶ್ವಿನಿ ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಖುಷಿ ಪಟ್ಟಿದ್ದಾರೆ. ಗಂಧದಗುಡಿ ಸಿನಿಮಾ ರೂಪದಲ್ಲಿ ಬಂದಿದ್ದು, ಈ ಚಿತ್ರವನ್ನು ಮಾರ್ಚ್ 17ರಂದು ಅಪ್ಪು ಹುಟ್ಟುಹಬ್ಬಕ್ಕೆ ರೀ ರಿಲೀಸ್ ಮಾಡೋದಕ್ಕೆ ಪ್ಲಾನ್ ಮಾಡಲಾಗಿದೆ.

Video Top Stories