Asianet Suvarna News Asianet Suvarna News

ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಶುರು ಕ್ರಿಕೆಟ್ ಹಬ್ಬ: ದುಬೈನಲ್ಲಿ ಸೆಲೆಬ್ರೆಟಿ ಆಟಗಾರರ ಬಿಡ್ಡಿಂಗ್.!

ಡಾ.ರಾಜ್ ಕಪ್ ಸೀಸನ್-6ಕ್ಕೆ ಟೈಂ ಫಿಕ್ಸ್..!
ರಾಜ್ ಕಪ್ ನಲ್ಲಿ 12 ತಂಡಗಳ ಹಣಾಗಣಿ.!
ಹೊರ ದೇಶಗಲ್ಲಿ ಸ್ಯಾಂಡಲ್ವುಡ್ನ ಕ್ರಿಕೆಟ್ ಹಬ್ಬ!

First Published Jun 19, 2023, 3:06 PM IST | Last Updated Jun 19, 2023, 3:06 PM IST

ಸ್ಯಾಂಡಲ್ ವುಡ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಶುರುವಾಗ್ತಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಮುಗಿದ ಬೆನ್ನಲ್ಲೇ ಈಗ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದೆ. ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆದಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಿ ರಾಜ್ ಕಪ್ ಪವರ್ ಹೆಚ್ಚಿಸಿದ್ದಾರೆ. ರಾಜ್ ಕಪ್ ಸೀಸನ್ 5ರಲ್ಲಿ ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ. 1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್ ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ ಅಂತ ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ್ ತಿಳಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಪಠಾಣ್, KGF-2 ನಂತರದ ಸ್ಥಾನ ಪಡೆದ ಆದಿಪುರುಷ್: ಮೊದಲ ದಿನದ ಕಲೆಕ್ಷನ್ ಎಷ್ಟು ?