ಸೊಂಟ ವೈಲೆಂಟ್.. ಪಾದ ಸೈಲೆಂಟ್.. ಅಡಡಡಾ... ಬಿಟ್ರೆ ದರ್ಶನ್‌ಗೆ ಲಕ್ವಾ ಹೊಡೆಯುತ್ತಾ? ಇದು ರೇಣುಕಾಸ್ವಾಮಿ ಶಾಪವಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್‌, ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್‌ ಗ್ಲೆನಿಗಲ್ಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. 

Share this Video
  • FB
  • Linkdin
  • Whatsapp

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್‌, ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್‌ ಗ್ಲೆನಿಗಲ್ಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ದರ್ಶನ್‌ ಅವರಿಗೆ ಚಿಕಿತ್ಸೆ ನೀಡುತ್ತಿರುವ ನರರೋಗ ವೈದ್ಯರು, ಕಾಲು ಮತ್ತು ಬೆನ್ನು ನೋವಿನಿಂದ ದರ್ಶನ್‌ ಬಳಲುತ್ತಿದ್ದಾರೆ. ಎಡಗಡೆ ಕಾಲು ದುರ್ಬಲವಾಗಿದೆ. ಇದರ ಸ್ಪರ್ಶತೆ ಕೂಡ ಕಡಿಮೆಯಾಗಿದೆ. ಹೆಚ್ಚಿನ ತಪಾಸಣೆ ಮಾಡಿ, ಯಾವ ರೀತಿ ಚಿಕಿತ್ಸೆ ಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಪೂರ್ತಿ ತಪಾಸಣೆ ಬಳಿಕ ಏನಾಗಿದೆ ಎಂಬುದು ಗೊತ್ತಾಗಲಿದೆ. ಎಂಆರ್‌ಐ, ಎಕ್ಸ್‌ರೇ ಮತ್ತು ರಕ್ತದ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video