
ಹೀರೋನಾ ಸರಿಯಾಗಿ ಬೆಂಡೆತ್ತಿದ್ದಾರೆ; ಧರ್ಮಣ್ಣ ಕಡೂರು
ಹಾಸ್ಯ ನಟ ಧರ್ಮಣ್ಣ ಕಡೂರ್ ಅಲ್ ಲಾಕ್ ರಾಘವ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮಾತನಾಡಿ, ಚಿತ್ರದಲ್ಲಿ ಹೀರೋನಾ ಸರಿಯಾಗಿ ಬೆಂಡೆತ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಸತ್ಯಪ್ರಕಾಶ್ ಬಗ್ಗೆ ಹಾಡಿಹೊಗಳಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನ್ ಲಾಕ್ ರಾಘವ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. ಅಪ್ಪು ನಿಧನದ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಮೊದಲ ಬಾರಿಗೆ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಲಾಂಚ್ ಮಾಡಿ ಸಿನಿಮಾತಂಡಕ್ಕೆ ಶುಭಾರೈಸಿದ್ದಾರೆ. ರಾಮ ರಾಮ ರೇ ಖ್ಯಾತಿಯ ಸತ್ಯಪ್ರಕಾಶ್ ನಿರ್ಮಾಣದ ಅನ್ ಲಾಕ್ ರಾಘವ ಸಿನಿಮಾಗೆ ದೀಪಕ್ ಮಧುವನಹಳ್ಳಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಮಿಲಿಂದ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿಯಾಗಿ ಲವ್ ಮಾಕ್ಟೇಲ್ –2 ಖ್ಯಾತಿಯ ನಟಿ ರೇಚಲ್ ಡೇವಿಡ್ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ದೊಡ್ಡ ತಾರಾಳಗವೆ ಇದೆ. ಹಾಸ್ಯ ನಟ ಧರ್ಮಣ್ಣ ಕಡೂರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮಾತನಾಡಿ, ಚಿತ್ರದಲ್ಲಿ ಹೀರೋನಾ ಸರಿಯಾಗಿ ಬೆಂಡೆತ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಸತ್ಯಪ್ರಕಾಶ್ ಬಗ್ಗೆ ಹಾಡಿಹೊಗಳಿದ್ದಾರೆ.