ಮತ್ತೊಂದು ಹೊಸ ಸಿನಿಮಾ ಮಾಡ್ತಾರಾ ನಿಖಿಲ್ ಕುಮಾರಸ್ವಾಮಿ?

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು, ಇದೀಗ ನಿಖಿಲ್ ಮತ್ತೊಂದು ಸಿನಿಮಾ ಮಾಡುತ್ತಾರೆ ಎಂಬ ಗಾಸಿಪ್ ಗಾಂಧಿನಗರದಲ್ಲಿ ಹರಿದಾಡುತ್ತಿದೆ. 
 

First Published Nov 13, 2023, 8:34 PM IST | Last Updated Nov 13, 2023, 8:34 PM IST

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. ಬೋಗನ್, ಭೂಮಿ, ಮತ್ತು ರೋಮಿಯೋ ಅಂಡ್ ಜೂಲಿಯೆಟ್‌ನಂತಹ ತಮಿಳು ಸಿನಿಮಾಗಳನ್ನು ನಿರ್ದೇಶಿಸಿದ್ದ ಲಕ್ಷ್ಮಣ್ ಅವರು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ಇದೀಗ ನಿಖಿಲ್ ಮತ್ತೊಂದು ಸಿನಿಮಾ ಮಾಡುತ್ತಾರೆ ಎಂಬ ಗಾಸಿಪ್ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅದು ನಿಖಿಲ್ ಅವರು ತಮ್ಮ ಬ್ಯಾನರ್‌ನಲ್ಲೇ ಚಿತ್ರವನ್ನು ಪ್ಯಾನ್ ಇಂಡಿಯಾ ಲೆವಲ್‌ನಲ್ಲಿ ನಿರ್ಮಿಸುತ್ತಿದ್ದಾರಂತೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Video Top Stories