ಲವ್ ಮೂಡ್‌ನಲ್ಲಿ ಹರಿಪ್ರಿಯಾ-ವಸಿಷ್ಠ; ಒಬ್ಬರಿಗೊಬ್ಬರು ಏನಂತ ಕರೆದುಕೊಳ್ತಾರೆ ಗೊತ್ತಾ?
ಸ್ಯಾಂಡಲ್ ವುಡ್ ಮತ್ತೊಂದು ಮದುವೆಗೆ ಸಜ್ಜಾಗಿದೆ. ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ.
ಸ್ಯಾಂಡಲ್ ವುಡ್ ಮತ್ತೊಂದು ಮದುವೆಗೆ ಸಜ್ಜಾಗಿದೆ. ಅದಿತಿ ಪ್ರಭುದೇವ ಮದುವೆ ಬೆನ್ನಲ್ಲೇ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅಂದಹಾಗೆ ಇಬ್ಬರದ್ದು ಲವ್ ಮ್ಯಾರೇಜ್. ಇಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಸಿಕ್ಕಿದ್ದು ಇದೀಗ ಮದುವೆಗೆ ಸಜ್ಜಾಗಿದ್ದಾರೆ. ಇಬ್ಬರೂ ಸದ್ಯ ದುಬೈಗೆ ಹಾರಿದ್ದು ಮದುವೆ ಶಾಪಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ. ಡಿಸೆಂಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವ ಈ ಜೋಡಿ ಜನವರಿ ಅಥವಾ ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಇಷ್ಟು ದಿನ ಬಚ್ಚಿಟ್ಟಿದ್ದ ಪ್ರೀತಿ ವಿಚಾರ ಬಹಿರಂಗವಾಗುತ್ತಿದ್ದಂತೆ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಎಲ್ಲರೂ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.