Interview With Malashree: ಪತಿಯ ಚಿತ್ರ ನಿರ್ಮಾಣ ಉತ್ಸಾಹವನ್ನು ನೆನಪಿಸಿಕೊಂಡ ಕನಸಿನ ರಾಣಿ

ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' ಚಿತ್ರ ಇದೇ ಡಿಸೆಂಬರ್ 31ರಂದು ತೆರೆಗೆ ಬರಲು ಸಜ್ಜಾಗಿದ್ದು, ಈ ನಡುವೆ ರಾಮು ಪತ್ನಿ ಮಾಲಾಶ್ರೀ ಅವರು ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ.
 

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಪ್ರಿಯಾಂಕಾ ತಿಮ್ಮೇಶ್ (Priyanka Thimmesh) ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' (Arjun Gowda) ಚಿತ್ರ ಇದೇ ಡಿಸೆಂಬರ್ 31ರಂದು ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಈ ನಡುವೆ ರಾಮು ಪತ್ನಿ ಮಾಲಾಶ್ರೀ (Malashree) ಅವರು ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ರಾಮು ಅವರ ಸಾಧನೆ, ಚಿತ್ರಗಳ ನಿರ್ಮಾಣದ ಉತ್ಸಾಹ ಸೇರಿದಂತೆ 'ಅರ್ಜುನ್ ಗೌಡ' ಚಿತ್ರದ ಮೇಕಿಂಗ್ ಹಾಗೂ ರಾಮು ಅವರು ಈ ಚಿತ್ರಕ್ಕಾಗಿ ಯಾವ ರೀತಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿಯನ್ನು ಮಾಲಾಶ್ರೀಯವರು ಹಂಚಿಕೊಂಡಿದ್ದಾರೆ.

Arjun Gowda Release: ಕೋಟಿ ರಾಮು ಕೊನೆಯ ಸಿನಿಮಾ ರಿಲೀಸ್‌ಗೆ ರೆಡಿ!

ಈಗಾಗಲೇ 'ಅರ್ಜುನ್ ಗೌಡ' ಚಿತ್ರದ ಫಸ್ಟ್‌ಲುಕ್, ಟೀಸರ್, ಹಾಗೂ ಟ್ರೇಲರ್ ಬಿಡುಗಡೆಯಾಗಿ ಸಾಕಷ್ಟು ಗಮನ ಸೆಳೆದಿದ್ದು, ನಿರ್ದೇಶಕ ಶಂಕರ್ (Shankar) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಲಾಕ್​ಡೌನ್​ ಆಗದೆ ಹೋಗಿದ್ದರೆ ಈ ಚಿತ್ರ ಏಪ್ರಿಲ್​​ನಲ್ಲಿ ಬಿಡುಗಡೆಯಾಗಬೇಕಿತ್ತು. ಅಲ್ಲದೇ ಚಿತ್ರದ ನಿರ್ಮಾಪಕರಾದ ರಾಮು ಅವರು ಕೊರೊನಾಗೆ ಬಲಿಯಾಗಿದ್ದರಿಂದ ಸಿನಿಮಾದ ಬಿಡುಗಡೆಗೆ ತಡವಾಯಿತು. ಹಾಗಾಗಿ ರಾಮು ಪತ್ನಿ ಮಾಲಾಶ್ರೀ ಇದೀಗ ಪತಿಯ ಕನಸನ್ನು ನನಸು ಮಾಡುತ್ತಿದ್ದಾರೆ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ತೆರೆ ಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video