ಮತ್ತೆ ಬಣ್ಣ ಹಚ್ಚುತ್ತಾರಾ ರಾಧಿಕಾ ಪಂಡಿತ್: ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಕೊಟ್ರಾ ಸರ್ಪ್ರೈಸ್?

ಸ್ಯಾಂಡಲ್‌ವುಡ್ ಬ್ಯೂಟಿ ರಾಧಿಕಾ ಪಂಡಿತ್ ಅವರು ನಿನ್ನಯಯಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ, ಇದೀಗ ನಟಿ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್‌ವೊಂದನ್ನು ಕೊಟ್ಟಿದ್ದಾರೆ. ಹೌದು! ರಾಧಿಕಾ ಪಂಡಿತ್ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

First Published Mar 8, 2024, 2:34 PM IST | Last Updated Mar 8, 2024, 2:34 PM IST

ಸ್ಯಾಂಡಲ್‌ವುಡ್ ಬ್ಯೂಟಿ ರಾಧಿಕಾ ಪಂಡಿತ್ ಅವರು ನಿನ್ನಯಯಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ, ಇದೀಗ ನಟಿ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್‌ವೊಂದನ್ನು ಕೊಟ್ಟಿದ್ದಾರೆ. ಹೌದು! ರಾಧಿಕಾ ಪಂಡಿತ್ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಮತ್ತೆ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡುತ್ತೇನೆಂದು ತಿಳಿಸಿದ್ದಾರೆ. ಇನ್ನು ‘ಮೊಗ್ಗಿನ ಮನಸ್ಸು’ ಚಿತ್ರದ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟ ರಾಧಿಕಾ ಪಂಡಿತ್, ಸಾಗರ್, ದೊಡ್ಮನೆ ಹುಡುಗ, ಅದ್ಧೂರಿ, ಡ್ರಾಮಾ, ಕಡ್ಡಿಪುಡಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. 2019ರಲ್ಲಿ ಕಡೆಯದಾಗಿ ‘ಆದಿಲಕ್ಷ್ಮಿ ಪುರಾಣ’ ಸಿನಿಮಾದಲ್ಲಿ ನಟಿಸಿದ್ದರು. ಬೇಡಿಕೆಯಿರುವಾಗಲೇ ನಟಿ ಯಶ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಆದರೆ ಮದುವೆ ಬಳಿಕವೂ ಸಿನಿಮಾ ಮಾಡಿ ರಾಧಿಕಾ ಗಮನ ಸೆಳೆದರು.
 

Video Top Stories