Asianet Suvarna News Asianet Suvarna News

Ramya New Movie: 'ಸ್ವಾತಿ ಮುತ್ತಿನ ಮಳೆ ಹನಿ'ಯಾಗಿ ಬರ್ತಾರೆ ಸ್ಯಾಂಡಲ್‌ವುಡ್ ಕ್ವೀನ್!

ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮತ್ತೆ ನಟಿಸಲು ರೆಡಿ ಆಗಿದ್ದಾರೆ. ರಾಜ್‌ ಬಿ ಶೆಟ್ಟಿ ನಟನೆ, ನಿರ್ದೇಶನದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ರಮ್ಯಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರವನ್ನು ರಮ್ಯಾ ಅವರ ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌ ನಿರ್ಮಿಸುತ್ತಿದೆ.

Oct 6, 2022, 12:25 PM IST

ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮತ್ತೆ ನಟಿಸಲು ರೆಡಿ ಆಗಿದ್ದಾರೆ. ರಾಜ್‌ ಬಿ ಶೆಟ್ಟಿ ನಟನೆ, ನಿರ್ದೇಶನದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ರಮ್ಯಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರವನ್ನು ರಮ್ಯಾ ಅವರ ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌ ನಿರ್ಮಿಸುತ್ತಿದೆ. ರಾಜ್‌ ಶೆಟ್ಟಿ ಅವರ ಲೈಟರ್‌ ಬುದ್ಧ ಫಿಲಂಸ್‌ ಸಂಸ್ಥೆಯ ಸಹಯೋಗ ಇದೆ. ಸದ್ಯ ಚಿತ್ರದ ಪ್ರಿ ಪ್ರೊಡಕ್ಷನ್‌ ಕೆಲಸಗಳು ಪ್ರಗತಿಯಲ್ಲಿವೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದ ಛಾಯಾಗ್ರಾಹಕ ಪ್ರವೀಣ್‌ ಶ್ರೀಯಾನ್‌ ಛಾಯಾಗ್ರಹಣ ಹಾಗೂ ಸಂಗೀತ ನಿರ್ದೇಶಕ ಮಿದುನ್‌ ಮುಕುಂದನ್‌ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರದ ಶೂಟಿಂಗ್‌ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment