Ramya: ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುವ ಬಗ್ಗೆ ಸ್ಪಷ್ಟನೆ ನೀಡಿದ ಮೋಹಕ ತಾರೆ!

ಸ್ಯಾಂಡಲ್‌ವುಡ್‌ನಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್, ಮೋಹಕ ತಾರೆಯಾಗಿ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ನಟಿ ರಮ್ಯಾ (Ramya) ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದು, ಇದೀಗ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುವ ಬಗ್ಗೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಕ್ವೀನ್, ಮೋಹಕ ತಾರೆಯಾಗಿ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ನಟಿ ರಮ್ಯಾ (Ramya) ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದು, ಇದೀಗ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುವ ಬಗ್ಗೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ಹೌದು! ಚಿತ್ರರಂಗದಿಂದ ದೂರವಾಗಿ, ಬಳಿಕ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಆ ನಂತರ ರಾಜಕೀಯದಿಂದಲೂ ದೂರವಾಗಿರುವ ರಮ್ಯಾ ಇದೀಗ ಮತ್ತೆ ಬೆಳ್ಳಿತೆರೆಗೆ ಬರಲು ತಯಾರಿ ನಡೆಸುತ್ತಿದ್ದಾರಂತೆ. 

Ramya Rachita Frindship: ಚಿತ್ರರಂಗಕ್ಕೆ ಮತ್ತೆ ಬನ್ನಿ ಕ್ವೀನ್‌ ಎಂದ ರಚ್ಚು!

ಇದೀಗ ಅವರೇ ಹೇಳಿರುವಂತೆ, 'ಕಳೆದ ಕೆಲವು ವರ್ಷಗಳಿಂದಲೂ ಸಾಕಷ್ಟು ಆಫ‌ರ್ ಬರುತ್ತಲೇ ಇವೆ. ಆದರೆ, ನಾನಾಗಿಯೇ ಯಾವುದನ್ನೂ ಒಪ್ಪಿಕೊಂಡಿರಲಿಲ್ಲ. ಸದ್ಯಕ್ಕೆ ನಾನು ಕೆಲವು ಸ್ಕ್ರಿಪ್ಟ್ಗಳನ್ನು ಓದುತ್ತಿದ್ದೇನೆ. ಆದಷ್ಟು ಬೇಗ ಈ ಬಗ್ಗೆ ಖಚಿತವಾದ ಮಾಹಿತಿ ನೀಡುತ್ತೇನೆ. ನನ್ನ ಕಮ್‌ ಬ್ಯಾಕ್‌ ಸಿನಿಮಾದ ಬಗ್ಗೆ ಮಾರ್ಚ್‌ ತಿಂಗಳಿನಲ್ಲಿ ನಾನು ಮಾಧ್ಯಮಗಳೊಟ್ಟಿಗೆ ಮಾಹಿತಿ ಹಂಚಿಕೊಳ್ಳುತ್ತೇನೆ' ಎನ್ನುವ ಮೂಲಕ ತಾವು ಚಿತ್ರರಂಗಕ್ಕೆ ಮರಳುತ್ತಿರುವ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video