
ಕಾಂತಾರ ನಟಿಗೆ ಫುಲ್ ಡಿಮ್ಯಾಂಡ್: ಸಪ್ತಮಿ ಗೌಡಗೆ ಅವಕಾಶಗಳ ಮಹಾಪೂರ
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್ ಶೈನ್ ಆಗುತ್ತಿದ್ದಾರೆ. ರಿಷಬ್ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಸಖತ್ ಶೈನ್ ಆಗುತ್ತಿದ್ದಾರೆ. ರಿಷಬ್ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇಬ್ಬರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ. ಫಾರೆಸ್ಟ್ ಗಾರ್ಡ್ ಆಗಿ ಸಪ್ತಮಿ ಗೌಡ ಅವರು ಕಾಣಿಸಿಕೊಂಡಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಸಪ್ತಮಿ ಗೌಡ ಅವರು ಈ ಮೊದಲು ‘ಪಾಪ್ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲಿ ನಟಿಸಿದ್ದರು. ಅವರಿಗೆ ‘ಕಾಂತಾರ’ ಎರಡನೇ ಚಿತ್ರ. ಈ ಸಿನಿಮಾ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು ಈ ಸಿನಿಮಾ ಸೂಪರ್ ಹಿಟ್ ಆಗಿರುವುದರಿಂದ ಸಹಜವಾಗಿಯೇ ಸಪ್ತಮಿ ಗೌಡ ಅವರ ಡಿಮ್ಯಾಂಡ್ ಹೆಚ್ಚಿದೆ. ಒಳ್ಳೊಳ್ಳೆಯ ಪಾತ್ರಗಳು ಅವರನ್ನು ಹುಡುಕಿಕೊಂಡು ಬರಲು ಆರಂಭಿಸಿವೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment