Totapuri: ಹೊಸ ಮೈಲಿಗಲ್ಲು ಸೃಷ್ಟಿಸಿದ ನವರಸನಾಯಕ ಜಗ್ಗೇಶ್!

ನವರಸ ನಾಯಕ ಜಗ್ಗೇಶ್‌ ನಟನೆಯ 'ತೋತಾಪುರಿ' ಸಿನಿಮಾ ತನ್ನ 'ಬಾಗ್ಲು ತೆಗಿ ಮೇರಿ ಜಾನ್‌' ಹಾಡಿನಿಂದ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಲ್ಲೂ ಈ ಸಿನಿಮಾದ ಹಾಡಿನ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. 

Share this Video
  • FB
  • Linkdin
  • Whatsapp

ನವರಸ ನಾಯಕ ಜಗ್ಗೇಶ್‌ (Jaggesh) ನಟನೆಯ 'ತೋತಾಪುರಿ' (Totapuri) ಸಿನಿಮಾ ತನ್ನ 'ಬಾಗ್ಲು ತೆಗಿ ಮೇರಿ ಜಾನ್‌' (Baglu Tegi Meri Jaan) ಹಾಡಿನಿಂದ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಲ್ಲೂ ಈ ಸಿನಿಮಾದ ಹಾಡಿನ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾದರೂ ಈ ಹಾಡನ್ನು ಯೂಟ್ಯೂಬ್‌ನಲ್ಲಿ ಹದಿನಾಲ್ಕು ಕೋಟಿಗೂ ಅಧಿಕ ಮಂದಿ ನೋಡಿದ್ದಾರೆ. ಇತ್ತೀಚೆಗೆ ಬಂದ ಹಾಡುಗಳ ಪೈಕಿ ದೊಡ್ಡ ಮಟ್ಟದಲ್ಲಿ ಜನರನ್ನು ಸೆಳೆದ ಹಾಡು ಇದಾಗಿದ್ದು, ದಿನದಿಂದ ದಿನಕ್ಕೆ ಇದರ ಕ್ರೇಜ್‌ ಹೆಚ್ಚಾಗುತ್ತಲೇ ಇದೆ. ರೀಲ್ಸ್‌ನಲ್ಲಿ ಈ ಹಾಡಿಗೆ ಡಾನ್ಸ್‌ ಮಾಡಿ ಅಪ್ಲೋಡ್‌ ಮಾಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ.

Totapuri: 'ಬಾಗ್ಲು ತೆಗಿ ಮೇರಿ ಜಾನ್' ಹಾಡು ಹಿಟ್ ಆಗಿದ್ದಕ್ಕೆ ಧನ್ಯವಾದ ತಿಳಿಸಿದ ಜಗ್ಗೇಶ್!

ಚಿತ್ರದ ನಿರ್ದೇಶಕ ವಿಜಯಪ್ರಸಾದ್‌ (Vijay Prasad) ಅವರೇ ಈ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ 'ನನ್ನ ಅಭಿಮಾನಿಗಳಿಗೆ ನಾನು ಮೊದಲು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಇಷ್ಟು ವರ್ಷಗಳ ವೃತ್ತಿ ಜೀವನದಲ್ಲಿ 8ರಿಂದ 10 ಮಿಲಿಯನ್​ ವೀವ್ಸ್​ ಆಗುವಂತಹ ಸಾಂಗ್​ ಸಿಕ್ಕಿದ್ದು ಇದೇ ಮೊದಲು. ಜನರು ಈ ಹಾಡನ್ನು ತುಂಬ ಇಷ್ಟಪಟ್ಟಿದ್ದಾರೆ ಎಂದು ಈ ಹಿಂದೆ ತಿಳಿಸಿದ್ದರು. ಇನ್ನು ಎರಡು ಭಾಗಗಳಲ್ಲಿ 'ತೋತಾಪುರಿ' ಚಿತ್ರವು ತೆರೆಗೆ ಬರಲಿದ್ದು, ಚಿತ್ರದಲ್ಲಿ ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ಡಾಲಿ ಧನಂಜಯ್, ವೀಣಾ ಸುಂದರ್‌ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ. ಕೆ.ಎ. ಸುರೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video