
ಕಿರುತೆರೆಯಿಂದ ಬೆಳ್ಳಿತೆರೆಯತ್ತ ಬ್ರೋ ಗೌಡ: ಕನ್ನಡದ ಮೊದಲ ಜಾಂಬಿ ಚಿತ್ರಕ್ಕೆ ಹೀರೋ ಆದ ಶಮಂತ್
ಬಿಗ್ ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಸಿ ಜನಪ್ರಿಯತೆ ಪಡೆದಿರುವ, ಆ ಬಳಿಕ ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಕಿರುತೆರೆ ಮನೆ ಮಾತನಾಗಿರುವ ನಟ ಬ್ರೋ ಗೌಡ ಶಮಂತ್ ಅವರನ್ನು ಹೀರೋ ಆಗಿ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.
ರಾಘು, ಶೆಫ್ ಚಿದಂಬರದಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಎಂ ಆನಂದ್ ರಾಜ್ ಈಗ ಹೊಸ ಸಿನಿಮಾ ಕೈಗೆತ್ತಿಗೊಂಡಿದ್ದಾರೆ. ಬಿಗ್ ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಸಿ ಜನಪ್ರಿಯತೆ ಪಡೆದಿರುವ, ಆ ಬಳಿಕ ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಕಿರುತೆರೆ ಮನೆ ಮಾತನಾಗಿರುವ ನಟ ಬ್ರೋ ಗೌಡ ಶಮಂತ್ ಅವರನ್ನು ಹೀರೋ ಆಗಿ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಇದು ಕನ್ನಡದ ಮೊದಲ ಜಾಂಬಿ ಸಿನಿಮಾ ಆಗಿರಲಿದ್ದು, ಚಿತ್ರಕ್ಕೆ ಪ್ರೊಡಕ್ಷನ್-1 ಅಂತಾ ತಾತ್ಕಾಲಿಕ ಟೈಟಲ್ ಇಡಲಾಗಿದೆ.
'ವಿದ್ಯಾಪತಿ' ಆಗಮನಕ್ಕೆ ಮುಹೂರ್ತ ಫಿಕ್ಸ್.: ಡಾಲಿ ಪಿಕ್ಚರ್ಸ್ ನಿರ್ಮಾಣದಲ್ಲಿ ಸಿದ್ಧವಾಗುತ್ತಿರೋ ವಿಧ್ಯಾಗಣಪತಿ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಅಗಿದೆ. ಏಪ್ರಿಲ್ 10ಕ್ಕೆ ವಿಧ್ಯಾ ಗಣಪತಿ ಸಿನಿಮಾ ತೆರೆಗೆ ಬರಲಿದೆ. ವಿದ್ಯಾಗಣಪತಿ ಸಿನಿಮಾದಲ್ಲಿ ಟಗರು ಪಲ್ಯದ ನಾಯಕ ನಾಗಭೂಷಣ್ ಅಭಿನಯಿಸಿದ್ದು, ಕರಾಟೆ ಕಿಂಗ್ ಅವತಾರವೆತ್ತಿದ್ದಾರೆ. ಕರಾಟೆ ಮಾಸ್ಟರ್ ಆಗಿ ಇಲ್ಲಿ ರಂಗಾಯಣ ರಘು ಅಭಿನಯಿಸಿದ್ದಾರೆ. ನಾಯಕಿಯಾಗಿ ಮಲೈಕಾ ಟಿ ವಸುಪಾಲ್ ನಾಗಭೂಷಣ್ ಗೆ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ.
ಯುವನ 'ಎಕ್ಕ' ಅಂಗಳಕ್ಕೆ ಬಂದ ಸಲಗ ಸುಂದರಿ: ರೋಹಿತ್ ಪದಕಿ ಸಾರಥ್ಯದ ಎಕ್ಕ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಯುವ ರಾಜ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿರೋ ಎಕ್ಕ ಸಿನಿಮಾಗೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆ ಆಗಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಕಂಬೈನ್ಸ್ ಬ್ಯಾನರ್‌ಗಳ ಅಡಿಯಲ್ಲಿ 'ಎಕ್ಕ' ಸಿನಿಮಾ ನಿರ್ಮಾಣ ಆಗುತ್ತಿದೆ.
ಎ.ಪಿ.ಅರ್ಜುನ್ ನಿರ್ಮಾಣದಲ್ಲಿ 'ಲಕ್ಷ್ಮೀ ಪುತ್ರ'ನಾದ ಚಿಕ್ಕಣ್ಣ: ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ಸಿನಿಮಾ ನಿರ್ಮಾಣ ಮಾಡಿದ್ರು. ಇದೀಗ ಎ.ಪಿ ಅರ್ಜುನ್ 3ನೇ ಸಿನಿಮಾ ಅನೌನ್ಸ್ ಆಗಿದೆ. ಆ ಚಿತ್ರಕ್ಕೆ ಲಕ್ಷ್ಮೀಪುತ್ರ ಎಂಬ ಟೈಟಲ್ ಇಡಲಾಗಿದೆ. ಲಕ್ಷ್ಮೀಪುತ್ರನಾಗಿ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ. ಎಪಿ ಅರ್ಜುನ್ ಗರಡಿಯಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ವಿಜಯ್ ಎಸ್ ಸ್ವಾಮಿ ಈ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸುತ್ತಿದ್ದಾರೆ.
ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್ ಎಂಟ್ರಿ: ಕ್ಲಾಸ್ ಸಿನಿಮಾಗಳ ಮೂಲಕ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಅಂಬರ್ ಮೊದಲ ಬಾರಿಗೆ ರಗಡ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ರೋಸ್ ಹಿಡಿಯುತ್ತಿದ್ದ ಪೃಥ್ವಿ ಕೈಗೆ ಲಾಂಗ್ ಕೊಟ್ಟು ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ರಕ್ತಹರಿಸಿದ್ದಾರೆ. ಅದು ಚೌಕಿದಾರ್ ಸಿನಿಮಾದಲ್ಲಿ. ಇದೀಗ ಚೌಕಿದಾರ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಖಾಕಿ ಲುಕ್ ನಲ್ಲಿ ಸುಧಾರಾಣಿ ಖದರ್ ತೋರಿಸಿದ್ದಾರೆ. ಹಿರಿಯ ನಟ ಸಾಯಿ ಕುಮಾರ್ ಪೃಥ್ವಿ ತಂದೆ ಪಾತ್ರದಲ್ಲಿ ಗಮನಸೆಳೆಯುತ್ತಾರೆ. ಧರ್ಮ, ಹಿರಿಯ ನಟಿ ಶ್ವೇತಾ ತಾರಾ ಬಳಗದಲ್ಲಿದ್ದಾರೆ. ನಾಯಕಿಯಾಗಿ ಧನ್ಯಾ ರಾಮ್ ಕುಮಾರ್ ಅಭಿನಯಿಸಿದ್ದಾರೆ.