ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್..?

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್‌ಗಳನ್ನು ಸಿರೀಸ್‌ಗಳನ್ನಾಗಿ ಮಾಡಲಾಗುತ್ತಿದೆ. 

Share this Video
  • FB
  • Linkdin
  • Whatsapp

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್‌ಗಳನ್ನು ಸಿರೀಸ್‌ಗಳನ್ನಾಗಿ ಮಾಡಲಾಗುತ್ತಿದೆ. ಸಿದ್ದಗಂಗಾ ಶ್ರೀಗಳು ಮಾಡಿದ ಸಾಮಾಜಿಕ ಕೆಲಸಗಳ ಸುತ್ತ ಈ ಮಿನಿ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. 

KGF 2 ಟ್ರೇಲರ್ ರಿಲೀಸ್ ವೇಳೆ ರಾಧಿಕಾ ಧರಿಸಿದ್ದ ಡ್ರೆಸ್ ಬೆಲೆ ಹುಡುಕಿದವರಿಗೆ ಶಾಕ್..!

ವಿಶೇಷ ಅಂದ್ರೆ ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯ. ಈ ಕಾರಣಕ್ಕೆ ಅವರ ಕಾಲ್‌ಶೀಟ್‌ ಅನ್ನು ಸಹ ಕೇಳಲಾಗಿದೆ. ಈ ಹಿಂದೆ ಅಮೃತ ಧಾರೆ ಸಿನಿಮಾದಲ್ಲಿ ಅಮಿತಾಭ್ ಅತಿಥಿ ಪಾತ್ರ ಮಾಡಿದ್ರು. ಇದಾದ ಬಳಿಕ ಅವರು ಕನ್ನಡಕ್ಕೆ ಮರಳಿಲ್ಲ. ಈಗ ಸಿದ್ಧಗಂಗಾ ಶ್ರೀಗಳ ಸಿನಿಮಾದಲ್ಲಿ ಬಿಗ್‌ ಬಿ ಬಣ್ಣ ಹಚ್ಚುವ ಸಾಧ್ಯತೆ ಇದೆ ಅಂತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್ ಹಾಗೂ ಸಂಸ್ಕೃತ ಭಾಷೆಗಳಲ್ಲಿ ಈ ಸೀರಿಸ್ ಸಿದ್ಧವಾಗುತ್ತಿದೆ. ಈ ಸಿನಿ ಸಿರೀಸ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಉದ್ಘಾಟನೆ ಮಾಡಲಿದ್ದಾರೆ.

Related Video