ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆ!
ಕಾಂತಾರ ಚಿತ್ರ ಬಿಡುಗಡೆಯಾದ ಮೇಲೆ ರಿಷಬ್ ಶೆಟ್ಟಿ ಹಲವು ಬಾರಿ ಧರ್ಮಸ್ಥಳ ಹಾಗೂ ಡಾ.ಡಿ ವಿರೇಂದ್ರ ಹೆಗ್ಗಡೆ ಕುರಿತು ಮಾತನಾಡಿದ್ದಾರೆ. ಇದೀಗ ಖುದ್ದು ವಿರೇಂದ್ರ ಹೆಗ್ಗಡೆ ಕಾಂತಾರ ಚಿತ್ರ ವೀಕ್ಷಿಸಿದ್ದಾರೆ.
ಕಾಂತಾರ ಚಿತ್ರ ದೇಶ ವಿದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಕನ್ನಡ ಮಣ್ಣಿನ ಕತೆ ಇದೀಗ ವಿಶ್ವದಲ್ಲೇ ಭಾರಿ ಸದ್ದು ಮಾಡುತ್ತಿದೆ. ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ ತುಳುನಾಡಿನ ದೈವಾರಾಧನೆ ಕುರಿತು ಈ ಚಿತ್ರ ಮಾಡುವ ಮೊದಲೇ ಧರ್ಮಸ್ಥಳಕ್ಕೆ ತೆರಳಿದ್ದರು. ಡಾ.ಡಿ ವಿರೇಂದ್ರ ಹೆಗ್ಗಡೆಯವರ ಬಳಿ ಚಿತ್ರದ ಕುರಿತು ವಿವರಣೆ ನೀಡಿ ಆಶೀರ್ವಾದ ಪಡೆದಿದ್ದರು. ಈ ಚಿತ್ರ ಭಾರಿ ಯಶಸ್ಸು ಕಂಡಿದೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಕುಟುಂಬ ಸಮೇತೆ ಕಾಂತಾರ ಚಿತ್ರ ವೀಕ್ಷಿಸಿದ್ದಾರೆ.