ಅಪ್ಪುಗೆ ಕರ್ನಾಟಕ ರತ್ನ; ರಾಜ್ಯಪಾಲರ ಬದಲು ಪ್ರಶಸ್ತಿ ಪ್ರದಾನ ಮಾಡಲಿರುವ ಸಿಎಂ

ರಾಜ್ಯಪಾಲರು ಪ್ರಶಸ್ತಿ ನೀಡುವ ಸಂಪ್ರದಾಯಕ್ಕೆ ತಿಲಾಂಜಲಿ ಇಡಲಾಗಿದ್ದು ಸಿಎಂ ಬೊಮ್ಮಾಯಿ ಅವರೇ ಕರ್ನಾಟಕ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. 
 

Share this Video
  • FB
  • Linkdin
  • Whatsapp

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು (ನವೆಂಬರ್ 1) ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಸಮಾರಂಭದಲ್ಲಿ ಪವರ್ ಸ್ಟಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಗೌರವ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಅನೇಕ ಗಣ್ಯರು ಹಾಜರಿರಲಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ಜೂ ಎನ್ ಟಿ ಆರ್ ಸೇರಿದಂತೆ ಅನೇಕರು ಗಣ್ಯರು ಭಾಗಿಯಾಗುತ್ತಿದ್ದಾರೆ. ಈ ಬಾರಿ ಸಿಎಂ ಅವರೇ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡುತ್ತಿದ್ದರು. ಆದರೆ ರಾಜ್ಯಪಾಲರು ಪ್ರಶಸ್ತಿ ನೀಡುವ ಸಂಪ್ರದಾಯಕ್ಕೆ ತಿಲಾಂಜಲಿ ಇಡಲಾಗಿದ್ದು ಸಿಎಂ ಬೊಮ್ಮಾಯಿ ಅವರೇ ಪ್ರಶಸ್ತಿ ನೀಡುತ್ತಿದ್ದಾರೆ. 

Related Video