ಸಾಹಿತ್ಯದಿಂದ ಸಿನಿಮಾದೆಡೆಗೆ, ರಂಗಭೂಮಿಯಿಂದ ಬೆಳ್ಳಿತೆರೆಗೆ; ನಟ ಲೋಹಿತಾಶ್ವ ಸಿನಿ ಜರ್ನಿ

ಸ್ಯಾಂಡಲ್ ವುಡ್ ನ ಹಿರಿಯ ನಟ ಲೋಹಿತಾಶ್ವ ಈಗ ನೆನಪು ಮಾತ್ರ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಲೋಹಿತಾಶ್ವ ಇತ್ತೀಚಿಗಷ್ಟೆ ಇಹಲೋಕ ತ್ಯಜಿಸಿದರು. 

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ. ಸುಮಾರು 500ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ನಟ ಲೋಹಿತಾಶ್ವ ಅವರು. ಲೋಹಿತಾಶ್ವ ಅವರ ಪುತ್ರ ಶರತ್ ಲೋಹಿತಾಶ್ವ ನಟರಾಗಿ ಗುರುತಿಸಿಕೊಂಡಿದ್ದಾರೆ. ಲೋಹಿತಾಶ್ವ ಅವರಿಗೆ ಮೂವರು ಮಕ್ಕಳು. ಹವ್ಯಾಸಿ ರಂಗಭೂಮಿ ಕಲಾವಿದರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ನಟಿಸಿದ ನಾಟಕದ ಪಾತ್ರವೊಂದನ್ನು ನೋಡಿ ಶಂಕರ್ ನಾಗ್ ಅವರು 'ಗೀತಾ' ಚಿತ್ರದಲ್ಲಿ ಅವಕಾಶ ನೀಡಿದರು.

Related Video