ಧೂಳೆಬ್ಬಿಸಿದ ಗಂಧದ ಗುಡಿ ಟ್ರೈಲರ್: ಕೋಟಿ ಜನರ ಮನ ಗೆದ್ದ ಅಪ್ಪು..!

ಕರುನಾಡ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈಗಾಗಲೇ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸುತ್ತಿದೆ. ಕೇವಲ 24 ಗಂಟೆಗಳಲ್ಲಿ 1 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಎಲ್ಲರ ಗಮನ ಸೆಳೆದಿದೆ.

Share this Video
  • FB
  • Linkdin
  • Whatsapp

ಅಪ್ಪು ಕನಸಿನ ಕೂಸು ಗಂಧದ ಗುಡಿ ಡಾಕ್ಯುಮೆಂಟರಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಅಕ್ಟೋಬರ್ 28ರಂದು ಭರ್ಜರಿ ಪ್ರದರ್ಶನ ಶುರುವಾಗಲಿದೆ. ಈಗಾಗಲೇ ಪಿಆರ್‌ಕೆ ಯೂಟ್ಯೂಬ್‌ ಚಾನಲ್‌ನಲ್ಲಿ 'ಗಂಧದಗುಡಿ' ಟ್ರೈಲರ್‌ ರಿಲೀಜ್ ಆಗಿದ್ದು, ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಪ್ರಧಾನಿ ಮೋದಿಯಿಂದ ಹಿಡಿದು ಅನೇಕ ಗಣ್ಯರು ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಂಧದ ಗುಡಿಯ ಟ್ರೈಲರ್’ನ್ನು 24 ಗಂಟೆಗಳಲ್ಲಿ ಒಂದು ಕೋಟಿಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದು, ಪವರ್ ಸ್ಟಾರ್ ಪುನೀತ್ ಕೋಟ್ಯಂತರ ಜನರ ಮನಸ್ಸನ್ನು ಗೆದ್ದಿದ್ದಾರೆ. 

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

Related Video