ಭೂಗತ ಜಗತ್ತಿನ 'ಗರುಡಗಮನ ವೃಷಭವಾಹನ' ಸಿನಿಮಾ ಮೆಚ್ಚಿದ ಸಿನಿರಸಿಕರು

ರಿಷಬ್‌ ಶೆಟ್ಟಿ ಹಾಗೂ ರಾಜ್‌ ಬಿ. ಶೆಟ್ಟಿ ಕಾಂಬಿನೇಷನ್‌ನ ಗರುಡಗಮನ ವೃಷಭವಾಹನ ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಚಿತ್ರವನ್ನು ವೀಕ್ಷಿಸಿದ ಸಿನಿಪ್ರೇಕ್ಷಕರು ಸಿನಿಮಾವನ್ನು ಕೊಂಡಾಡಿದ್ದಾರೆ. ಮಂಗಳೂರಿನ ಭೂಗತ ಜಗತ್ತಿನ ಸುತ್ತ ಚಿತ್ರ ಕಥಾಹಂದರವಿದೆ. 
 

Share this Video
  • FB
  • Linkdin
  • Whatsapp

ರಿಷಬ್‌ ಶೆಟ್ಟಿ (Rishab Shetty) ಹಾಗೂ ರಾಜ್‌ ಬಿ. ಶೆಟ್ಟಿ (Raj B Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana) ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ನಗರದ ಊರ್ವಶಿ ಚಿತ್ರಮಂದಿರದಲ್ಲಿ ಚಿತ್ರವನ್ನು ವೀಕ್ಷಿಸಿದ ಸಿನಿಪ್ರೇಕ್ಷಕರು ಸಿನಿಮಾವನ್ನು ಕೊಂಡಾಡಿದ್ದಾರೆ. ಜೊತೆಗೆ ರಿಷಬ್‌ ಶೆಟ್ಟಿ ಹಾಗೂ ರಾಜ್‌ ಬಿ. ಶೆಟ್ಟಿ ಅಭಿಮಾನಿಗಳಿಗೆ ಸಾಥ್ ಕೊಟ್ಟಿದ್ದು, ಒಂದು ಹೊಸ ಪ್ರಯತ್ನವನ್ನು ಮಾಡಿದ್ದೇವೆ. ಒಳ್ಳೆಯ ಪ್ರಯತ್ನ, ಮನಸುಗಳು, ಯೋಚನೆಗಳೆಲ್ಲಾ ಒಟ್ಟಾಗಿ ಸೇರಿದರೆ ಒಂದು ಒಳ್ಳೆಯ ಸಿನಿಮಾವಾಗುತ್ತದೆ. ಆ ಸಿನಿಮಾದಿಂದನೇ ನಾವೆಲ್ಲಾ. ಸಿನಿಮಾ ವೀಕ್ಷಿಸಿದ ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ.

Add Asianetnews Kannada as a Preferred SourcegooglePreferred

'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

ಇದರಲ್ಲಿ ಗರುಡಗಮನ ಅಂದರೆ ವಿಷ್ಣು. ಪ್ರಧಾನ ಪಾತ್ರಗಳಲ್ಲಿ ಒಬ್ಬನಿಗೆ ವಿಷ್ಣುವಿನ ಸಂಯಮ ಸ್ವಭಾವ, ಇನ್ನೊಬ್ಬ ವೃಷಭವಾಹನ ಅಂದರೆ ಶಿವ, ಆತನದು ನಿಯಂತ್ರಣವೇ ಇಲ್ಲದ ವಿಪರೀತ ಸ್ವಭಾವ. ಇಂಥ ಸ್ವಭಾವದ ಇಬ್ಬರು ರೌಡಿಸಂನಲ್ಲಿ ಹೇಗೆ ಸೌಂಡ್‌ ಮಾಡ್ತಾರೆ ಅನ್ನುವ ಕಥೆ. ಇನ್ನು ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಅವರೇ ಆಕ್ಷನ್ ಕಟ್ ಹೇಳಿದ್ದು, ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿದೆ. ಲೈಟರ್‌ ಬುದ್ಧ ಫಿಲಂನಡಿ ರವಿ ರೈ ಹಾಗೂ ವಚನ್‌ ಶೆಟ್ಟಿ ಚಿತ್ರ ನಿರ್ಮಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video