ಗೀತಾ ಪಿಕ್ಚರ್ಸ್ ನಿರ್ಮಾಣದ 4ನೇ ಸಿನಿಮಾ ಘೋಷಣೆ; ಹೀರೋ ಯಾರು?
ಈ ವರ್ಷದ ಬ್ಲಾಕ್ ಬಸ್ಟರ್ 'ಭೈರತಿ ರಣಗಲ್' ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ. ಡಾ. ಪಾರ್ವತಮ್ಮ ರಾಜಕುಮಾರ್ ಅವರ ಹುಟ್ಟುಹಬ್ಬ ಹಿನ್ನೆಲೆ ತಮ್ಮ 4ನೇ ಚಿತ್ರವನ್ನು ಅನೌನ್ಸ್ ಮಾಡಿದೆ.
ಈ ವರ್ಷದ ಬ್ಲಾಕ್ ಬಸ್ಟರ್ 'ಭೈರತಿ ರಣಗಲ್' ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ. ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್ ಅವರ ಹುಟ್ಟುಹಬ್ಬ ಹಿನ್ನೆಲೆ ತಮ್ಮ 4ನೇ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾದಲ್ಲಿ ದೊಡ್ಮನೆ ಕುಡಿ ಧೀರೆನ್ ರಾಮ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ,. ಶಾಖಾಹಾರಿ ಚಿತ್ರದ ಡೈರೆಕ್ಟರ್ ಸಂದೀಪ್ ಸುಂಕದ ನಿರ್ದೇಶನ ಮಾಡುತ್ತಿದ್ದಾರೆ.
ಅಂದಹಾಗೆ, ಸ್ಯಾಂಡಲ್‌ವುಡ್ ಖ್ಯಾತ ನಿರ್ಮಾಪಕಿಯಾಗಿ ಬೆಳೆದ ಪಾರ್ವತಮ್ಮ ರಾಜ್‌ಕುಮಾರ್ ಅವರು ಹುಟ್ಟಿದ್ದು ಸಾಲಿಗ್ರಾಮದಲ್ಲಿ, 06 ಡಿಸೆಂಬರ್ 1939 ರಂದು (6 December 1939, Saligrama).