ಹೀರೋ ಆದ ಪಿ.ಲಂಕೇಶ್ ಮೊಮ್ಮಗ: ಸಿನಿಮಾ ಸೆಟ್​ನಲ್ಲಿ ಸಮರ್ಜಿತ್ ಹುಟ್ಟುಹಬ್ಬ ಆಚರಣೆ!

ಖ್ಯಾತ ಸಾಹಿತಿ ಪತ್ರಕರ್ತ ಪಿ.ಲಂಕೇಶ್  ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ 'ಗೌರಿ' ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.

Share this Video
  • FB
  • Linkdin
  • Whatsapp

ಖ್ಯಾತ ಸಾಹಿತಿ ಪತ್ರಕರ್ತ ಪಿ.ಲಂಕೇಶ್ ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ 'ಗೌರಿ' ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡ ಶೂಟಿಂಗ್ ಸೆಟ್ ನಲ್ಲೇ ಆಚರಿಸಿದ್ದಾರೆ. ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ ಮುಂತಾದವರು ಸಮರ್ಜಿತ್ ಹುಟ್ಟುಹಬ್ಬದಲ್ಲಿ ಭಾಗಿ ಆಗಿದ್ರು. 'ಗೌರಿ' ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಶೂಟಿಂಗ್ ಆಗಿದೆ.ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿ ಬಂದಿದೆ.

Related Video