Asianet Suvarna News Asianet Suvarna News
breaking news image

ಗುಡ್ ನ್ಯೂಸ್ ನೀಡಿದ್ರು ಹರ್ಷಿಕಾ ಪೂಣಚ್ಚ-ಭುವನ್ : ತಾಯಿಯಾಗ್ತಿದ್ದಾರೆ 'ಕೊಡಗಿನ ಬೆಡಗಿ'..!

ನಟಿ ಹರ್ಷಿಕಾ ಪೂಣಚ್ಚ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಟಿಯೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಈ ಖುಷಿಯಲ್ಲಿ ಫೋಟೋಶೂಟ್ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
 

ಹರ್ಷಿಕಾ ಭುವನ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ವರ್ಷ 2023, ಆಗಸ್ಟ್ 24ರಂದು ಹರ್ಷಿಕಾ ಪೂಣಚ್ಚ ಬಹುಕಾಲದ ಗೆಳೆಯ ನಟ ಭುವನ್ ಪೊನ್ನಣ್ಣ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ಸಿನಿಮಾದಿಂದ ದೂರ ಉಳಿದಿದ್ದ ನಟಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದರು. ಜೊತೆ ಯೂಟ್ಯೂಬ್ ಚಾನೆಲ್‌ನಲ್ಲಿ ಕೊಡಗಿನ ವಿಶಿಷ್ಟ ಅಡುಗೆಯನ್ನು ತಮ್ಮ ಅಭಿಮಾನಿಗಳಿಗೆ ಮಾಡಿ ತೋರಿಸುತ್ತಿದ್ದರು. ಈ ಗ್ಯಾಪ್‌ನಲ್ಲೇ ತಮ್ಮ ಫ್ಯಾನ್ಸ್ ಖುಷಿ ವಿಷಯವನ್ನು ಹಂಚಿಕೊಂಡಿದ್ದಾರೆ. ಕನ್ನಡದ ಚಿತ್ರರಂಗದ ಸ್ಟಾರ್ ದಂಪತಿ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ(Harshika Poonacha) ಮತ್ತು ಭುವನ್ ಪೊನ್ನಣ್ಣ(Bhuvan Ponnanna) ಇದೀಗ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕೊಡವ ಸಂಪ್ರದಾಯದ ಉಡುಗೆಯಲ್ಲೇ ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿರುವ ದಂಪತಿ ಮಗುವಿನ(Child) ಆಗಮನದ ಸುದ್ದಿ ಘೋಷಿಸಿದ್ದಾರೆ ಇದೇ ಅಕ್ಟೋಬರ್‌ನಲ್ಲಿ ಮಗು ಬರಲಿರುವ ಸಂತಸದಲ್ಲಿದ್ದಾರೆ ಹರ್ಷಿಕಾ ದಂಪತಿ. ಬಹುಕಾಲದ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಕಳೆದ ವರ್ಷ ಆಗಸ್ಟ್ 24ರಂದು ಕೊಡಗಿನಲ್ಲೇ ಅವರ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದರು. ಇದೀಗ ವರ್ಷದೊಳಗೆ ಮಗು ಆಗಮಿಸುವ ಸುದ್ದಿ ಕೊಟ್ಟಿದ್ದಾರೆ. ಹರ್ಷಿಕಾ ಪೂಣಚ್ಚ ಈಗ ಐದು ತಿಂಗಳ ಗರ್ಭಿಣಿ. ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಭುವನ್ ದಂಪತಿ ಇದ್ದಾರೆ. ಇದೇ ಖುಷಿಯಲ್ಲಿ ಈ ಜೋಡಿ ಫೋಟೊಶೂಟ್ ಮಾಡಿಸಿದೆ. 

ಇದನ್ನೂ ವೀಕ್ಷಿಸಿ:  ಯಾರಾಗ್ತಾರೆ ಕೆಂಪೇಗೌಡ..? ಉಪ್ಪೀನಾ..? ಡಾಲಿನಾ..? ಯಾರ ಪಾಲಾಯ್ತು ಟೈಟಲ್..?

Video Top Stories